Sunday, September 8, 2024
spot_img
More

    Latest Posts

    ವಿಟ್ಲ: ಬಾಲಕಿಗೆ ಕಿರುಕುಳ; ಪ್ರಕರಣ ದಾಖಲು

    ವಿಟ್ಲ; ಶಾಲಾ ಬಾಲಕಿಗೆ ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನ ವಿರುದ್ದ ವಿಟ್ಲ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

    ಪೆರುವಾಯಿ ಮೂಲದ ಯುವಕ ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಹಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದಲ್ಲದೆ ಶಾಲೆ ಸಮೀಪ ಬಂದು ಬಾಲಕಿಯನ್ನು ಬೈಕ್ ನಲ್ಲಿ ಕೂರುವಂತೆ ಹೇಳಿದ್ದು, ಈ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸಿದ್ದಾನೆ.

    ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದಾರೆ. ಈ ಕುರಿತು ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss