ಬಂಟ್ವಾಳ: ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಹೇಳಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶುಕ್ರವಾರ ರಾತ್ರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಮಂಗಳೂರು ಫಳ್ನೀರು ನಿವಾಸಿ ರಿಯಾಜ್ (38) ಎಂಬಾತನನ್ನು ಬಂಧಿಸಲಾಗಿದ್ದು, ಘಟನೆಗೆ ಸಂಬಂಧಿಸಿ ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇದುವರೆಗೂ ಇರಲಿಲ್ಲ ಹಾಗೂ ಯಾವುದೇ ಆಯುಧಗಳು ಆತನ ಬಳಿ ಇರಲಿಲ್ಲ. ರಸ್ತೆಯಲ್ಲಿ ವಾಹನ ಓವರ್ ಟೇಕ್ ಮಾಡುವ ಸಂದರ್ಭದ ಜಗಳ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದ್ದು, ಮತ್ತಷ್ಟು ತನಿಖೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
