ಸುಬ್ರಹ್ಮಣ್ಯ, ಜುಲೈ 13: ಮಾಜಿ ಸಚಿವರಾದ ಎಚ್.ಡಿ. ರೇವಣ್ಣ ಅವರು ದಿನಾಂಕ 13ರಂದು ಸೋಮವಾರ ಬೆಳಿಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ ಹಾಗೂ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಪ್ರಿಯಾ ಸಾಲಿಯಾನ್, ಸಾಮಾಜಿಕ ಮುಖಂಡ ಜಾಕೆ ಸಂತೋಷ್ ಅವರು ಜೊತೆಗಿದ್ದು, ದೇವರ ಆಶೀರ್ವಾದ ಪಡೆದರು.
ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರು ಕುಕ್ಕೆ ಸುಬ್ರಹ್ಮಣ್ಯ ಮಠದ 38ನೇ ಪೀಠಾಧಿಪತಿಗಳಾಗಿದ್ದಾರೆ. ಅವರ ಮಾರ್ಗದರ್ಶನ ಪಡೆದರು ರಾಜ್ಯದ ಸುಭಿಕ್ಷತೆ, ರೈತರ ಕಲ್ಯಾಣ ಹಾಗೂ ಜನರ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.

