ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಉಪ್ಪಿನಂಗಡಿಯ ನಟ್ಟಿಬೈಲ್ ನಿವಾಸಿ ಹರಿಪ್ರಸಾದ್ ಎಂಬುವವರು 2022ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ. ಹರಿಪ್ರಸಾದ್ ಅವರು 1996ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು. ಪುತ್ತೂರು ಗ್ರಾಮಾಂತರ, ಮಂಗಳೂರು ದಕ್ಷಿಣ, ಕಡಬ ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣೆ ಹಾಗೂ ಉಪ್ಪಿನಂಗಡಿಯಲ್ಲಿರುವ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರ ಕಚೇರಿ, ಬಂಟ್ವಾಳ ವೃತ್ತ ನಿರೀಕ್ಷಕರ ಕಚೇರಿ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿರುವ ಇವರು ಕಳೆದ ಐದು ವರ್ಷಗಳಿಂದ ದ. ಕ. ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಕರ್ತವ್ಯದಲ್ಲಿದ್ದಾರೆ.
©2021 Tulunada Surya | Developed by CuriousLabs