ಸುರತ್ಕಲ್: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ, ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಮಿತಿ (ರಿ.), ಗುರುನಗರ, ಕೃಷ್ಣಾಪುರ ಇವರ ಸಹಯೋಗದಲ್ಲಿ ರಾಷ್ಟ್ರೀಯ ಆಯುಷ್ ಅಭಿಯಾನ 2026-27ರ ಕಾರ್ಯಕ್ರಮದ ಅಂಗವಾಗಿ ವಯೋಮಿತ್ರ ಆರೋಗ್ಯ ಶಿಬಿರ ಹಾಗೂ ಉಚಿತ ಆಯುಷ್ ಚಿಕಿತ್ಸಾ ಶಿಬಿರವನ್ನು ನವೆಂಬರ್ 29ರ ಭಾನುವಾರ ಆಯೋಜಿಸಲಾಗಿದೆ.
ಗುರುನಗರದ ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಮಿತಿಯ ವಠಾರದಲ್ಲಿ ಅಂದು ಬೆಳಿಗ್ಗೆ 9 ಗಂಟೆಗೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಶಿಬಿರದಲ್ಲಿ ಸಾರ್ವಜನಿಕರಿಗೆ ಉಚಿತ ಆಯುಷ್ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸುವ ಉದ್ದೇಶ ಹೊಂದಲಾಗಿದೆ.
ಕಾರ್ಯಕ್ರಮದಲ್ಲಿ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ವಜ್ರಾಕ್ಷಿ ಪಿ. ಶೆಟ್ಟಿ, ನಿಕಟಪೂರ್ವ ಮಹಾನಗರ ಪಾಲಿಕೆ ಸದಸ್ಯೆ ಲಕ್ಷ್ಮಿ ಶೇಖರ್ ದೇವಾಡಿಗ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಮಿತಿ ಗುರುನಗರ ಕೃಷ್ಣಾಪುರದ ಅಧ್ಯಕ್ಷ ರಮಾನಾಥ ಶೆಟ್ಟಿ, ಕಾರ್ಯಾಧ್ಯಕ್ಷ ರಾಮಚಂದ್ರ, ಕಾರ್ಯದರ್ಶಿ ದಕ್ಷಿತ್ ಶೆಟ್ಟಿ, ಚಲನಚಿತ್ರ ನಟ ಭಗವಾನ್ ಸುರತ್ಕಲ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಮತ್ತು ಆಪದ್ಬಾಂಧವ ಸಮಾಜ ಸೇವಾ ಸಂಘ (ರಿ.), ಇಡ್ಯಾ, ಸುರತ್ಕಲ್ ಇದರ ಸ್ಥಾಪಕ ಅಧ್ಯಕ್ಷ ಉಮೇಶ್ ಐ. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ವಯೋವೃದ್ಧರು ಸೇರಿದಂತೆ ಸಾರ್ವಜನಿಕರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು. ಆಯುಷ್ ಚಿಕಿತ್ಸಾ ಪದ್ಧತಿಗಳ ಮೂಲಕ ಆರೋಗ್ಯ ಸಂರಕ್ಷಣೆ ಹಾಗೂ ಆರೋಗ್ಯ ಜಾಗೃತಿ ಮೂಡಿಸುವ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಹಕರಿಸಬೇಕೆಂದು ಸಂಘಟಕರು ವಿನಂತಿಸಿದ್ದಾರೆ

