ಮಂಗಳೂರು ನಗರ ಹೊರವಲಯದ ದೇರಳಕಟ್ಟೆ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು 23 ವರ್ಷದ ಉಪ್ಪಿನಂಗಡಿ ನಿವಾಸಿ ನಾಗೇಶ್ ಎಂದು ಗುರುತಿಸಲಾಗಿದೆ. ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಇವರು ಕರ್ತವ್ಯ ಮುಗಿಸಿದ ಬಳಿಕ ತಮ್ಮ ಕೊಠಡಿಗೆ ಹೋಗಿ ನಿದ್ರಿಸಿದ್ದರು. ಆದರೆ ಮಲಗಿದ್ದಲ್ಲಿಯೇ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಿಸಲಾಗಿದೆ.
©2021 Tulunada Surya | Developed by CuriousLabs