ರಾಜ್ಯಾದ ಹಲವೆಡೆ ನಿನ್ನೆ ಸಿಡಿಲು ಗುಡುಗು ಸಹಿತ ಭಾರಿ ಮಳೆಯಾಗಿದ್ದು ಸಿಡಿಲು ಬಡಿದು ಒಟ್ಟು ಮೂವರು ಸಾವಿಗೀಡಾಗಿದ್ದಾರೆ.
ವಿಜಯಪುರ, ಬಳ್ಳಾರಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಈ ಪ್ರಕರಣ ನಡೆದಿದೆ.
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಕಿರಿಶ್ಯಾಳ ಗ್ರಾಮದ ತೋಡಲ್ಲಿ ದ್ಯಾಮಣ್ಣ ಶರೇಕಾರ (20) ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ. ಜಮೀನಿನಲ್ಲಿ ಸಂಗ್ರಹಿಸಿದ್ದ ಈರುಳ್ಳಿ ಚೀಲಗಳಿಗೆ ಪ್ಲಾಸ್ಟಿಕ್ ಹೊದಿಸಲು ಹೋಗಿದ್ದಾಗ ಈ ಅವಘಡ ಸಂಭವಿಸಿದೆ.
ನಿಡಗುಂದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬಳ್ಳಾರಿ ಜಿಲ್ಲೆಯ ಯಾಲ್ಪಿ ಕುಂತ್ನಾಳ ಗ್ರಾಮದಲ್ಲಿ ರೈತ ಪಂಪಾವತಿ (56) ಎಂಬವರು ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ. ಇವರು ಜಮೀನಿಗೆ ನೀರು ಕಟ್ಟಲು ತೆರಳಿದ್ದರು.ಸಿಡಿಲು ಮಳೆ ಬಂದಿದ್ದರಿಂದ ಮರದ ಕೆಳಗೆ ನಿಂತಿದ್ದರು.ಅದೇ ಸಮಯಕ್ಕೆ ಸಿಡಿಲು ಬಡಿದು ಮೃತಪಟ್ಟರು.
ಈ ಕುರಿತು ಪಿ.ಡಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.