ಉಡುಪಿ: ರಾ.ಹೆ.169 ಎ ಆಗುಂಬೆ ಘಾಟಿಯ 11ನೇ ತಿರುವಿನಲ್ಲಿ ಭೂಕುಸಿತ ಹಿನ್ನೆಲೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಜುಲೈ 30ರವರೆಗೆ ಸ್ಥಗಿತಗೊಳಿಸಿ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಲಾಗಿದೆ.
ಪ್ರಸ್ತುತ ಕಾಮಗಾರಿ ಆಗಿರುವುದರಿಂದ ಆ.31ರವರೆಗೆ ಲಘು ವಾಹನ ಹಾಗೂ ಬಸ್ಸುಗಳನ್ನು ಹೊರತುಪಡಿಸಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಸಾರ್ವಜನಿಕರಿಂದ ಬಸ್ಸುಗಳ ಸಂಚಾರಕ್ಕೆ ಅನುಮತಿ ನೀಡಲು ಕೋರಿಕೆ ಬರುತ್ತಿರುವುದರಿಂದ ಅನುಮತಿ ನೀಡಲಾಗಿದೆ. ಈಗಾಗಲೇ ಭೂಕುಸಿತದಿಂದಾಗಿ ರಸ್ತೆಬದಿಯಲ್ಲಿ ಬಿದ್ದು ಹೋಗಿದ್ದ ಗಾರ್ಡ್‌ವಾಲ್ ಮರು ನಿರ್ಮಾಣ ಕಾಮಗಾರಿ ಕೈಗೊಂಡಿದ್ದು ಸದ್ಯ ತಾತ್ಕಾಲಿಕ ದುರಸ್ತಿ ಕಾರ್ಯ ಮುಗಿಯಲು ಎರಡು ವಾರ ಬೇಕು. ಪ್ರಸ್ತುತ ಘಾಟಿಯಲ್ಲಿ ಮಳೆ ಆಗುತ್ತಿದ್ದು ಭೂಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.