ರಾಜ್ಯಾಧ್ಯಂತ ವಿಧಾನಸಭಾ ಚುನಾವಣೆಯ ಕಾವು ದಿನೇ ದಿನೇ ರಂಗೇರಿದೆ. ಈ ವೇಳೆಯಲ್ಲಿಯೇ ಅಕ್ರಮ ತಡೆಗೆ ಚುನಾವಣಾಧಿಕಾರಿಗಳು ಬಿಗಿ ಕ್ರಮ ಕೈಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಲಿಕ್ಯಾಪ್ಟರ್ ಅನ್ನು ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚುನಾವಣಾ ಪ್ರಚಾರಕ್ಕಾಗಿ ಹೆಲಿಕ್ಯಾಪ್ಟರ್ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ತೆರಳಿದ್ದರು. ಈ ಸಂದರ್ಭದಲ್ಲಿ ಚುನಾವಣಾಧಿಕಾರಿಗಳು ಅವರನ್ನು ತಡೆದಿದ್ದಾರೆ.
ಚುನಾವಣಾಧಿಕಾರಿ ಕುಸುಮಾಧರ್ ಅವರು ಎಸ್ಪಿ ವಿಕ್ರಮ್ ಅಮಟೆ ನೇತೃತ್ವದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಲಿಕ್ಯಾಪ್ಟರ್, ಅವರ ಬಳಿಯಲ್ಲಿದ್ದಂತ ಸೂಟ್ ಕೇಸ್ ಅನ್ನು ಪರಿಶೀಲನೆ ನಡೆಸಿದರು. ಈ ಬಳಿಕ ಮುಖ್ಯಮಂತ್ರಿ ಬೊಮ್ಮಾಯಿ ತೆರಳಲು ಅವಕಾಶ ಮಾಡಿಕೊಟ್ಟರು.
