ಬೆಂಗಳೂರು : ಹಿಜಾಬ್ ಪ್ರಕರಣದ 9ನೇ ದಿನದ ವಿಚಾರಣೆಯನ್ನ ಹೈಕೋರ್ಟ್ ತ್ರಿ ಸದಸ್ಯ ಪೀಠ ನಾಳೆ 2.30ಕ್ಕೆ ಮುಂದೂಡಿದೆ.
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ನೇತೃತ್ವದ ತ್ರಿ ಸದಸ್ಯ ಪೀಠ ಒಂದು ವಾರದಿಂದ ಅರ್ಜಿಗಳ ವಿಚಾರಣೆ ನಡೆಯುತ್ತಿದ್ದು, ವಿಚಾರಣೆಯನ್ನ ನಾಳೆಗೆ ಮುಂದೂಡಿದೆ.
ಅಂದ್ಹಾಗೆ, ಸೋಮವಾರ ಹಿಜಾಬ್ ಇಸ್ಲಾಂ ಅತ್ಯಗತ್ಯ ಧಾರ್ಮಿಕ ಆಚರಣೆ ಎಂಬುದಕ್ಕೆ ಪುರಾವೆ ಇಲ್ಲ ಎಂದು ಅಡ್ವೊಕೇಟ್ ಜನರಲ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ಪೀಠದಲ್ಲಿ ವಾದ ಆಲಿಸಿ ಮಂಗಳವಾರಕ್ಕೆ ವಿಚಾರಣೆ ಮುಂದೂಡಿತ್ತು. ಸಧ್ಯ ಸಮವಸ್ತ್ರದ ಜೊತೆಗೆ ಹಿಜಾಬ್ ಧರಿಸಲು ಕೋರಿದ್ದ ಅರ್ಜಿ ವಿಚಾರಣೆಯನ್ನ ಬುಧವಾರ ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ ಮುಂದೂಡಿದೆ.