Sunday, September 8, 2024
spot_img
More

    Latest Posts

    ಬಂಟ್ವಾಳ: ಶೆಡ್ ಮೇಲೆ ಗುಡ್ಡ ಕುಸಿತ -ಮೂವರ ಸಾವು

    ಬಂಟ್ವಾಳ:  ಕಾರ್ಮಿಕ ರು ಉಳಿದುಕೊಂಡ ಶೆಡ್ ಗೆ ಕುಸಿದ ಗುಡ್ಡ, ಶೆಡ್ ನೊಳಗೆ ಸಿಲುಕಿಕೊಂಡ ನಾಲ್ವರು ಕಾರ್ಮಿಕರ ಪೈಕಿ ಮೂವರು ಮೃತಪಟ್ಟು , ಓರ್ವ ಕಾರ್ಮಿಕ ಆಸ್ಪತ್ರೆಯಲ್ಲಿ ‌ಚಿಕಿತ್ಸೆ ಪಡೆಯುತ್ತಿದ್ದಾನೆ.

    ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಹೆನ್ರಿ ಕಾರ್ಲೊ ಎಂಬವರ ಮನೆಯ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಐವರ ಪೈಕಿ ನಾಲ್ವರು ಗುಡ್ಡ ಜರಿದು ಶೆಡ್ ನೊಳಗೆ ಸಿಲುಕಿಕೊಂಡಿದ್ದರು, ಅದರಲ್ಲಿ ಮೂವರನ್ನು ಜೆಸಿಬಿ ಮೂಲಕ ರಕ್ಷಣೆ ಮಾಡಿದರೆ ಓರ್ವ ಮೃತಪಟ್ಟಿದ್ದ.ಉಳಿದಂತೆ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಇಬ್ಬರು ಚಿಕಿಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ರಾತ್ರಿ ಮೃತಪಟ್ಟ ಬಗ್ಗೆ ‌ಮಾಹಿತಿ‌ ಲಭ್ಯವಾಗಿದೆ.ಪಾಲಕ್ಕಾಡು ನಿವಾಸಿ ವಿಜು (46)ಉಳಿದಂತೆ ಕೊಟ್ಟಾಂ ನಿವಾಸಿ ಬಾಬು (46) ಎಂಬವರನ್ನು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಅಲ್ಫೊನ್ಸಾ ಮೃತಪಟ್ಟ ದುರ್ದೈವಿಗಳು.ಕಣ್ಣೂರು ನಿವಾಸಿ ಜಾನ್ (44)ಎಂಬಾತ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss