Friday, April 19, 2024
spot_img
More

    Latest Posts

    ಸುಳ್ಯ: ಮನೆ ಕಾಮಗಾರಿ ವೇಳೆ ತಡೆಗೋಡೆ ಕುಸಿತ – ಮೂವರು ಕಾರ್ಮಿಕರ ಸಾವು

    ಸುಳ್ಯ : ತಡೆಗೋಡೆ ಕಾಮಗಾರಿ ಮೇಳೆ ಗುಡ್ಡದ ಮಣ್ಣು ಜರಿದು ಮೂವರು ಮಣ್ಣಿನಡಿ ಸಿಲುಕಿ ಸಾವನಪ್ಪಿದ್ದ ಘಟನೆ ಸುಳ್ಯದ ಗಾಂಧಿನಗರ ಬಳಿ ನಡೆದಿದೆ.

    ಮೃತರನ್ನು ಸೋಮಶೇಖರ (45), ಪತ್ನಿ ಶಾಂತ (40) ಮತ್ತು ಇನ್ನೋರ್ವ ಕಾರ್ಮಿಕ ಎಂದು ಗುರುತಿಸಲಾಗಿದೆ. ಸೋಮಶೇಖರ್ ಮತ್ತು ಶಾಂತಾ ಗದಗ ಮೂಲದ ಮುಂಡರಗಿ ತಾಲೂಕಿನವರು ಎಂದು ತಿಳಿದು ಬಂದಿದೆ.

    ಗಾಂಧಿನಗರ-ಆಲೆಟ್ಟಿ ರಸ್ತೆಯಲ್ಲಿ ಕಾರ್ಮಿಕರು ಸೆಂಟರಿಂಗ್ ಕೆಲಸ ಮಾಡುತ್ತಿದ್ದ ವೇಳೆ ಗುರುಂಪು ಬಳಿ ಬರೆ ಜರಿದು ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದಿದೆ, ಇದರಿಂದ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಈ ಪೈಕಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವ ಮಹಿಳೆಗಾಗಿ ಹುಡುಕಾಟ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

    ಸದ್ಯ ರಕ್ಷಣಾ ತಂಡದಿಂದ ಕಾರ್ಯಾಚರಣೆ ನಡೆಯುತ್ತಿದೆ. ಜೆಸಿಬಿ ಮುಖಾಂತರ ಮಣ್ಣು ತೆಗೆಯುವ ಕೆಲಸ ನಡೆಯುತ್ತಿದೆ. ಸ್ಥಳಕ್ಕೆ ಶಾಸಕ ಅಂಗಾರ ಅವರು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss