Friday, June 14, 2024
spot_img
More

    Latest Posts

    ದ.ಕ.ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ, ಆರೆಂಜ್ ಅಲರ್ಟ್ ಘೋಷಣೆ

    ಮಂಗಳೂರು: ದ.ಕ.ಜಿಲ್ಲೆಯಾದ್ಯಂತ ಮಳೆಯು ಬಿರುಸು ಪಡೆಯುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ನಿನ್ನೆ ರಾತ್ರಿಯಿಂದಲೇ ನಿರಂತರ ಮಳೆಯಾಗುತ್ತಿದ್ದು, ಇಂದು ಬೆಳಗ್ಗೆಯೂ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ ಮುನ್ನೆಚ್ಚರಿಕಾ ದೃಷ್ಟಿಯಿಂದ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳು, ಡಿಪ್ಲೊಮಾ/ಐಟಿಐಗಳಿಗೆ ದ.ಕ.ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

    ಇಂದು ಮಳೆಯ ತೀವ್ರತೆ ಹೆಚ್ಚಾಗಿದ್ದು, ಹವಾಮಾನ ಇಲಾಖೆ ಕರಾವಳಿಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss