Saturday, July 27, 2024
spot_img
More

    Latest Posts

    ಉಡುಪಿ: ಕೆಲಸದ ಮನೆಯ ಚಿನ್ನ ಕದ್ದ ಹೋಮ್ ನರ್ಸ್ ಅಂದರ್

    ಹಿರಿಯಡ್ಕ: ವೃದ್ಧ ಮಹಿಳೆಯ ಆರೈಕೆಗೆಂದು ಬಂದ ಹೋಮ್ ನರ್ಸ್ ಕೆಲಸಕ್ಕೆ ಸೇರಿದ ಕೆಲವೇ ದಿನಗಳಲ್ಲಿ ವೃದ್ಧೆಯ ಕುತ್ತಿಗೆಯಲ್ಲಿದ್ದ ಒಂದೂವರೆ ಲಕ್ಷ ರೂ. ಮೌಲ್ಯದ ಚಿನ್ನದ ಸರ ಕದ್ದು ಪರಾರಿಯಾಗಿದ್ದಳು.ಇದೀಗ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಾಗಲಕೋಟೆಯ ಹೆಬ್ಬಾಳ್ವೆಯ ರೇಖಾ ಆರೋಪಿ.ಈಕೆಯನ್ನು ಬಂಧಿಸಿ ಕಳವು ಮಾಡಿದ್ದ ಚಿನ್ನದ ಸರವನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ.

    ಮದಗದ ಚೆನ್ನಿಬೆಟ್ಟು ನಿವಾಸಿ ವಸಂತ ಶೆಟ್ಟಿ ಅವರು ತಮ್ಮ 98 ವರ್ಷದ ತಾಯಿ ಸರಸ್ವತಿ ಅವರನ್ನು ನೋಡಿಕೊಳ್ಳಲು ಉಡುಪಿಯ ಉಷಾ ಮ್ಯಾರೇಜ್ ಬ್ಯುರೋ & ಜಾಬ್ ಲಿಂಕ್ಸ್ ಏಜೆನ್ಸಿ ಮುಖಾಂತರ ರೇಖಾ ಹೆಬ್ಬಾಳ್ಳಿ ಎಂಬಾಕೆಯನ್ನು ಹೋಂ ನರ್ಸ್ ಆಗಿ ನೇಮಿಸಿದ್ದರು.

    ಅ.20 ರಿಂದ ರೇಖಾ ಹೆಬ್ಬಳ್ಳಿ, ಸರಸ್ವತಿ ಅವರ ಆರೈಕೆ ಮಾಡಿ ನೋಡಿಕೊಂಡಿದ್ದು, ನ.21 ರಂದು ಸಂಜೆ ವೇಳೆ ರೇಖಾ ಹೆಬ್ಬಳ್ಳಿ ಯಾರಿಗೂ ಹೇಳದೇ ಮನೆಯಿಂದ ಹೋಗಿದ್ದಳು. ಬಳಿಕ ವಸಂತ ಶೆಟ್ಟಿ ಅವರು ಸರಸ್ವತಿ ಅವರ ಬಳಿ ಹೋಗಿ ನೋಡಿದಾಗ ಅವರ ಕುತ್ತಿಗೆಯಲ್ಲಿದ್ದ 1,45,000 ರೂ ಮೌಲ್ಯದ ಚಿನ್ನದ ಚೈನ್ ಇರಲಿಲ್ಲ. ಈ ಬಗ್ಗೆ ರೇಖಾಳಿಗೆ ಫೋನ್ ಮಾಡಿದಾಗ ಆಕೆ ಫೋನ್ ಸ್ವೀಕರಿಸುತ್ತಿರಲಿಲ್ಲ. ಅದರಂತೆ ವಸಂತ ಶೆಟ್ಟಿ ಅವರ ತಾಯಿಯ ಚಿನ್ನದ ಚೈನ್ ಕಳವಾಗಿದ್ದು ಚೈನನ್ನು ರೇಖಾ ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಸಂಶಯ ಇರುವುದಾಗಿ ನೀಡಿದ ದೂರಿನಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss