Monday, January 30, 2023

ಯುವತಿಯ ದ್ವಿಚಕ್ರ ವಾಹನ ಕಿತ್ತುಕೊಂಡು ಪರಾರಿಯಾದ ಫೇಸ್ಬುಕ್ ಗೆಳೆಯ; ಪ್ರಕರಣ ದಾಖಲು

ಮೈಸೂರು : ಫೇಸ್ ಬುಕ್ ನಲ್ಲಿ ಪರಿಚಯವಿಲ್ಲದ ವ್ಯಕ್ತಿಯ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಮೈಸೂರಿನ ಯುವತಿಯೊಬ್ಬರು ತಮ್ಮ ಸ್ಕೂಟರ್ ಕಳೆದುಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಫೇಸ್ ಬುಕ್ ನಲ್ಲಿ ಪರಿಚಯವಾದ ಯುವಕ...
More

    Latest Posts

    ರಂಗ ಕಲಾವಿದ ಅರವಿಂದ್ ಬೋಳಾರ್ ಗೆ ಅಪಘಾತ – ಆಸ್ಪತ್ರೆಗೆ ದಾಖಲು

    ಮಂಗಳೂರು: ಖ್ಯಾತ ರಂಗಕಲಾವಿದ ತುಳುನಾಡ ಮಾಣಿಕ್ಯ ಎಂದೇ ಖ್ಯಾತರಾಗಿರುವ ಅರವಿಂದ್ ಬೋಳಾರ್ ಅವರಿಗೆ ಪಂಪ್ ವೆಲ್ ಬಳಿ ಅಪಘಾತವಾಗಿದೆ. ಪಂಪ್ ವೆಲ್ ಬಳಿ ಅತೀ ವೇಗವಾಗಿ...

    ಲಯನ್ಸ್ ಕ್ಲಬ್ ಮಂಗಳಾದೇವಿ ವತಿಯಿಂದ ಶಾಲಾ ಮಕ್ಕಳೊಂದಿಗೆ ಗಣರಾಜ್ಯೋತ್ಸವ ಸಂಭ್ರಮ

    ಮಂಗಳೂರು: 74 ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ನಗರದ ನೋಬಲ್ ಸ್ಕೂಲ್ ಕುಂಜತ್ ಬೈಲ್ ನಲ್ಲಿ ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ ಅಧ್ಯಕ್ಷರಾದ ಲಯನ್ ಅನಿಲ್ ದಾಸ್ ರಾಷ್ಟ್ರ ಧ್ವಜಾರೋಹಣ ಗೈದು...

    ಪದವು ಬಿಕರ್ನಕಟ್ಟೆ ಸರಕಾರಿ ಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವ

    ಮಂಗಳೂರು: ಪದವು ಬಿಕರ್ನಕಟ್ಟೆ ಸರಕಾರಿ ಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವದ ಅಂಗವಾಗಿ ದ್ವಜಾರೋಹಣ ಕಾರ್ಯಕ್ರಮವನ್ನು ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರು ಕರ್ನಾಟಕ ಮತ್ತು...

    74ನೇ ಗಣರಾಜ್ಯೋತ್ಸವದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್‌ ಕಟ್ಟಡದಲ್ಲಿ ಧ್ವಜಾರೋಹಣ

    ಕೋಟೆಕಾರು ಪಟ್ಟಣ ಪಂಚಾಯತ್‌ ಕಟ್ಟಡದಲ್ಲಿ 74 ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಕೋಟೆಕಾರು ಪಟ್ಟಣ ಪಂಚಾಯತ್‌ನ ಕೌನ್ಸಿಲರ್‌ ರಾಘವ ಗಟ್ಟಿಯವರು ಧ್ವಜಾರೋಹಣಗೈದರು.ಬಳಿಕ ಇಲ್ಲಿನ ಮೂಲಭೂತ ಸೌಕರ್ಯಗಳನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು.

    ಮಿನಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 10 ಸಾವಿರ ರೂ.ಗೆ ಹೆಚ್ಚಳ

    ಬೆಳಗಾವಿ : ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮಹಿಳ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಗುಡ್ ನ್ಯೂಸ್ ನೀಡಿದ್ದು, 10,000 ರೂ ಗೌರವಧನ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

    ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಸಲೀಂ ಅಹಮದ್ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದ ಎಲ್ಲಾ ಮಿನಿ ಅಂಗನವಾಡಿಗಳನ್ನು ಪೂರ್ಣಾವಧಿ ಅಂಗನವಾಡಿಗಳಾಗಿ ಮೇಲ್ದರ್ಜೆಗೇರಿಸಿ ಕಾರ್ಯಕರ್ತೆಯರಿಗೆ 10,000 ರೂ ಗೌರವಧನ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

    ಮಿನಿ ಅಂಗನವಾಡಿಗಳು ಪೂರ್ಣಾವಧಿಯಲ್ಲಿ ಕಾರ್ಯ ನಿರ್ವಹಿಸದ ಕಾರಣ ಸದ್ಯ 7,500 ರೂ ವೇತನ ನೀಡಲಾಗುತ್ತಿದೆ, ಮುಂದಿನ ದಿನಗಳಲ್ಲಿ ಮಿನಿ ಅಂಗನವಾಡಿಗಳನ್ನು ಪೂರ್ಣಾವಧಿ ಅಂಗನವಾಡಿಗಳಾಗಿ ಮೇಲ್ದರ್ಜೆಗೇರಿಸಿ ಕಾರ್ಯಕರ್ತೆಯರಿಗೆ 10,000 ರೂ ಗೌರವಧನ ನೀಡಲಾಗುತ್ತದೆ ಎಂದು ಹೇಳುವ ಮೂಲಕ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.

    ಇನ್ನೂ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರ ಸೇವೆಯು ಕೇಂದ್ರ ಪುರಸ್ಕೃತ ಯೋಜನೆಯಡಿಯಲ್ಲಿ ಗೌರವ ಸೇವೆಯಾಗಿರುವುದರಿಂದ ಮತ್ತು ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರನ್ನು ಕಾರ್ಮಿಕರೆಂದು ಪರಿಗಣಿಸದಿರುವುದರಿಂದ ಇವರಿಗೆ ಇಎಸ್ ಐ ಸೌಲಭ್ಯ ವಿಸ್ತರಿಸಲು ಅವಕಾಶವಿರುವುದಿಲ್ಲ ಹಾಗೂ ಕನಿಷ್ಟ ವೇತನ ಕಾಯ್ದೆ ಇವರಿಗೆ ಅನ್ವಯಿಸುವುದಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಆಚಾರ ಹಾಲಪ್ಪ ಬಸಪ್ಪ ತಿಳಿಸಿದ್ದಾರೆ.

    ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರುಗಳಿಗೆ ಸರ್ಕಾರವು ಹೆಚ್ಚಿನ ಪ್ರೋತ್ಸಾಹವನ್ನು ನೀಡುವ ಬದಲಿಗೆ ಇವರಿಗೆ ಕನಿಷ್ಠ ಪ್ರಮಾಣದ ಗೌರವ ಧನವನ್ನು ನೀಡುತ್ತಿದೆ. ಈ ಅಂಗನವಾಡಿ ಉದ್ಯೋಗಿಗಳಿಗೆ ಸರ್ಕಾರವು ಸಾಮಾಜಿಕ, ಆರ್ಥಿಕ ಮತ್ತು ಔದ್ಯಮಿಕ ಭದ್ರತೆಯನ್ನು ಒದಗಿಸುವ ಕಾಳಜಿ ತೋರದೆ ಕೇವಲ ದುಡಿಮೆಗಾಗಿ ಬಳಕೆಯ ವಸ್ತುಗಳಂತೆ ವ್ಯವಹರಿಸುತ್ತಿರುವುದು ಶೋಷಣಾಣಾತ್ಮಕ ಧೋರಣೆಯಾಗಿದೆ. ಈ ನೌಕರಿಗೆ ಸಾಮಾಜಿಕ ಸುರಕ್ಷ ಯೋಜನೆಯಾದ ಇ.ಎಸ್.ಐ. ಸೌಲಭ್ಯ ಹಾಗೂ ಸರ್ಕಾರಿ ನೌಕರರಿಗೆ ರೂಪಿಸಿರುವ ನೌಕರ ಸ್ನೇಹಿ ಉಚಿತ ವೈದ್ಯಕೀಯ ಯೋಜನೆಯನ್ನು ಇವರಿಗೂ ಸಹ ವಿಸ್ತರಿಸದೇ ವಿಚಾರವು ಗಂಭೀರವಾಗಿದೆ. ನಿಸ್ವಾರ್ಥತೆ ಮತ್ತು ಸೇವಾ ಮನೋಭಾವದಿಂದ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಮಸ್ಯೆಯನ್ನು ಚರ್ಚಿಸಿ ಸೂಕ್ತ ಪರಿಹಾರವನ್ನು ಒದಗಿಸಬೇಕು ಎಂದು ಸದಸ್ಯ ಸಲೀಂ ಅಹ್ಮದ್ ಅವರು ನಿಯಮ 330ರಡಿ ಮಂಡಿಸಿದ ವಿಷಯಕ್ಕೆ ಸಚಿವರು ಲಿಖಿತ ಹೇಳಿಕೆಯಲ್ಲಿ ಈ ವಿಷಯ ತಿಳಿಸಿದ್ದಾರೆ.

    Latest Posts

    ರಂಗ ಕಲಾವಿದ ಅರವಿಂದ್ ಬೋಳಾರ್ ಗೆ ಅಪಘಾತ – ಆಸ್ಪತ್ರೆಗೆ ದಾಖಲು

    ಮಂಗಳೂರು: ಖ್ಯಾತ ರಂಗಕಲಾವಿದ ತುಳುನಾಡ ಮಾಣಿಕ್ಯ ಎಂದೇ ಖ್ಯಾತರಾಗಿರುವ ಅರವಿಂದ್ ಬೋಳಾರ್ ಅವರಿಗೆ ಪಂಪ್ ವೆಲ್ ಬಳಿ ಅಪಘಾತವಾಗಿದೆ. ಪಂಪ್ ವೆಲ್ ಬಳಿ ಅತೀ ವೇಗವಾಗಿ...

    ಲಯನ್ಸ್ ಕ್ಲಬ್ ಮಂಗಳಾದೇವಿ ವತಿಯಿಂದ ಶಾಲಾ ಮಕ್ಕಳೊಂದಿಗೆ ಗಣರಾಜ್ಯೋತ್ಸವ ಸಂಭ್ರಮ

    ಮಂಗಳೂರು: 74 ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ನಗರದ ನೋಬಲ್ ಸ್ಕೂಲ್ ಕುಂಜತ್ ಬೈಲ್ ನಲ್ಲಿ ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ ಅಧ್ಯಕ್ಷರಾದ ಲಯನ್ ಅನಿಲ್ ದಾಸ್ ರಾಷ್ಟ್ರ ಧ್ವಜಾರೋಹಣ ಗೈದು...

    ಪದವು ಬಿಕರ್ನಕಟ್ಟೆ ಸರಕಾರಿ ಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವ

    ಮಂಗಳೂರು: ಪದವು ಬಿಕರ್ನಕಟ್ಟೆ ಸರಕಾರಿ ಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವದ ಅಂಗವಾಗಿ ದ್ವಜಾರೋಹಣ ಕಾರ್ಯಕ್ರಮವನ್ನು ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರು ಕರ್ನಾಟಕ ಮತ್ತು...

    74ನೇ ಗಣರಾಜ್ಯೋತ್ಸವದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್‌ ಕಟ್ಟಡದಲ್ಲಿ ಧ್ವಜಾರೋಹಣ

    ಕೋಟೆಕಾರು ಪಟ್ಟಣ ಪಂಚಾಯತ್‌ ಕಟ್ಟಡದಲ್ಲಿ 74 ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಕೋಟೆಕಾರು ಪಟ್ಟಣ ಪಂಚಾಯತ್‌ನ ಕೌನ್ಸಿಲರ್‌ ರಾಘವ ಗಟ್ಟಿಯವರು ಧ್ವಜಾರೋಹಣಗೈದರು.ಬಳಿಕ ಇಲ್ಲಿನ ಮೂಲಭೂತ ಸೌಕರ್ಯಗಳನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು.

    Don't Miss

    ಪೊಲೀಸರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು; 80 ಲಕ್ಷ ರೂ. ದರೋಡೆ

    ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು, ಕಾರಿನಲ್ಲಿ ತೆರಳುತ್ತಿದ್ದವರಿಂದ 80 ಲಕ್ಷ ರೂ. ದರೋಡೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೇವಲ 15 ನಿಮಿಷದಲ್ಲಿ 80 ಲಕ್ಷ ರೂ. ಹಣವನ್ನು...

    ಕೋಟ : ಪಡುಕರೆ ನಿವಾಸಿ ಕತಾರ್ ನಲ್ಲಿ ಕುಸಿದು ಬಿದ್ದು ಸಾವು

    ಕೋಟ: ಕತಾರ್‌ನಲ್ಲಿ ಕೆಲಸ ಮಾಡುತ್ತಿದ್ದ ಕೋಟ ಸಮೀಪ ಕೋಟ ತಟ್ಟು ಪಡುಕರೆ ನಿವಾಸಿ ಮುಹಮ್ಮದ್‌ (45) ಕತಾರ್‌ನಲ್ಲಿ ಗುರುವಾರ ಬೆಳಗ್ಗೆ ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದಾರೆ. ಮೃತರು ತಾಯಿ,...

    ಸಂಕ್ರಾಂತಿ ಬಳಿಕ ಕೇಂದ್ರ ಸಂಪುಟ ವಿಸ್ತರಣೆ?

    ಹೊಸದಿಲ್ಲಿ : ಕೇಂದ್ರ ಸಚಿವ ಸಂಪುಟದಲ್ಲಿ ಬದಲಾವಣೆ ತರಲು ಪ್ರಧಾನಿ ನರೇಂದ್ರ ಮೋದಿಯವರು ಚಿಂತನೆ ನಡೆಸುತ್ತಿದ್ದು, ಜ.14ರ ಬಳಿಕ ಬದಲಾವಣೆ ಸಾಧ್ಯತೆ ಇದೆ. ಬಿಜೆಪಿ ಸಂಘಟನೆಯನ್ನು ಬಲಪಡಿಸುವುದು...

    BIGG NEWS : ‘ರಿಷಭ್ ಪಂತ್’ಗೆ ಗಂಭೀರ ಗಾಯ ; ‘ಉತ್ತಮ ಆರೋಗ್ಯ & ಯೋಗಕ್ಷೇಮ’ಕ್ಕಾಗಿ ಪ್ರಧಾನಿ ಮೋದಿ ಪ್ರಾರ್ಥನೆ

    ನವದೆಹಲಿ: ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಶುಕ್ರವಾರ ಬೆಳಿಗ್ಗೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಹಿಂತಿರುಗುವಾಗ ಅಪಘಾತಕ್ಕೀಡಾಗಿದ್ದು, ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. 'ಖ್ಯಾತ ಕ್ರಿಕೆಟಿಗ ರಿಷಭ್ ಪಂತ್...

    ಡಿ.31 ರಿಂದ ಜ.1 ರವರೆಗೆ ಒಳಗುಡ್ಡೆ ಕಾಂಬೋಡಿಗುತ್ತು ಶ್ರೀ ಉಗ್ಗೆದಲ್ತಾಯ ದೈವಸ್ಥಾನದ ಪುನರ್ ಪ್ರತಿಷ್ಠೆ, ದೊಂದಿ ನೇಮೋತ್ಸವ

    ಬಂಟ್ವಾಳ: ಬಂಟ್ವಾಳ ತಾಲೂಕಿನ ಕೂರಿಯಾಳ ಗ್ರಾಮದ ಒಳಗುಡ್ಡೆ ಕಾಂಬೋಡಿಗುತ್ತು ಶ್ರೀ ಉಗ್ಗೆದಲ್ತಾಯ ದೈವಸ್ಥಾನದ ಪುನರ್ ಪ್ರತಿಷ್ಠೆ, ಕಲಶಾಭಿಷೇಕ ಹಾಗೂ ಪ್ರತಿಷ್ಠಾ ದೊಂದಿ ನೇಮೋತ್ಸವ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ...