ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಜ್ಞಾನ ವಿಕಾಸ ಯೋಜನೆಯ ಅಧ್ಯಕ್ಷೆ ಹೇಮಾವತಿ ವಿ. ಹೆಗ್ಗಡೆ, ಸಾಮಾಜಿಕ ಕಾರ್ಯಕರ್ತ ಹರಿಕೃಷ್ಣ ಪುನರೂರು, ರಂಗಕರ್ಮಿ ದೇವದಾಸ್ ಕಾಪಿಕಾಡ್ ಅವರಿಗೆ ಮಂಗಳೂರು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪ್ರಕಟಿಸಿದೆ.
ಏ.23ರಂದು ನಡೆಯಲಿರುವ ವಿಶ್ವವಿದ್ಯಾಲಯದ 40ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಈ ಮೂವರಿಗೆ ಡಿ.ಲಿಟ್. ಹಾಗೂ ವೈದ್ಯಕೀಯ ಕ್ಷೇತ್ರದ ಸೇವೆಗಾಗಿ ಶಿವಾನಂದ ನಾಯಕ್ ಅವರಿಗೆ ಡಿ.ಎಸ್ಸಿ ಪದವಿ ಪ್ರದಾನ ಮಾಡಲಿದ್ದಾರೆ ಎಂದು ಕುಲಪತಿ ಪ್ರೊ. ಪಿ.ಎಸ್.ಯಡಪಡಿತ್ತಾಯ ಗುರುವಾರ ಇಲ್ಲಿ ತಿಳಿಸಿದರು.
