Saturday, October 12, 2024
spot_img
More

    Latest Posts

    ಉಡುಪಿ: ಪತಿಗೆ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರು ಎರಚಿದ ಪತ್ನಿ- ಪ್ರಕರಣ ದಾಖಲು

    ಕಾಪು: ಉಡುಪಿಯ ಕಟಪಾಡಿ ಸಮೀಪದ ಮಣಿಪುರದಲ್ಲಿ ಪತ್ನಿಯೊಬ್ಬಳು ತನ್ನ ಪತಿಯ ಮೈಮೇಲೆ ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎರಚಿದ್ದು ಪತಿ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ.

    ಪತಿ ಮೊಹಮ್ಮದ್ ಅಶ್ರಫ್‌‌ಗೆ ಪತ್ನಿ ಅಫ್ರೀನ್, ಅತ್ತೆ, ಮಾವ ಹಾಗೂ ಮತ್ತಿತರರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

    ಇನ್ನು ಘಟನೆಯಲ್ಲಿ ಮುಖ, ದೇಹ, ಎಡಗೈ, ಎದೆ, ಬೆನ್ನು ಬಲಕೈ ಸುಟ್ಟು ಹೋಗಿ ಗಂಭೀರವಾಗಿ ಗಾಯಗೊಂಡಿರುವ ಆಸಿಫ್ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಆಸಿಫ್ ಬೇರೆ ಹುಡುಗಿಯೊಂದಿಗೆ ಸಂಬಂಧ ಹೊಂದಿರುವುದಾಗಿ ಅನುಮಾನ ಹೊಂದಿದ್ದ ಅಫ್ರೀನ್, ಈ ಬಗ್ಗೆ ಆಗಾಗ್ಗೆ ಜಗಳವಾಡುತ್ತಿದ್ದಳೆನ್ನಲಾಗಿದೆ.

    ಸೆ.17ರಂದು ಸಂಜೆ ಆಸಿಫ್ ಬಾತ್ ರೂಮಿನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಅಫ್ರೀನ್ ಹೊರಗಿನಿಂದ ಬಾಗಿಲು ಬಡಿದಿದ್ದು, ಆಸಿಫ್ ಬಾಗಿಲು ತೆರೆದಾಗ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರನ್ನು ಮೈ ಮೇಲೆ ಎರಚಿದ್ದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

    ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss