ಶಾಲಾ ಬಾಲಕಿಯನ್ನು ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಹೋಟೆಲ್ ಸಪ್ಲೇಯರ್ ಓರ್ವನನ್ನು ಭದ್ರಾವತಿ ಪೇಪರ್ ಟೌನ್ ಠಾಣೆ ಪೊಲೀಸರು ಬಂಧಿಸಿದ ಘಟನೆ ಸೋಮವಾರ ನಡೆದಿದೆ. ಉಮೇಶ್ (28) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಭದ್ರಾವತಿ ಹೊರವಲಯದ ಹೋಟೆಲ್ ವೊಂದರಲ್ಲಿ ಆರೋಪಿ ಸಪ್ಲೇಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಹೋಟೆಲ್ ಗೆ ಆಗಮಿಸುತ್ತಿದ್ದ ಬಾಲಕಿಯ ಪರಿಚಯ ಮಾಡಿಕೊಂಡಿದ್ದ ಆರೋಪಿ, ಸೋಮವಾರ ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಬಸ್ ನಲ್ಲಿ ತರೀಕೆರೆಗೆ ಕರೆದೊಯ್ದಿದ್ದ. ಅಲ್ಲಿನ ಲಾಡ್ಜ್ ವೊಂದರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಈ ವಿಷಯ ಯಾರಿಗೂ ತಿಳಿಸದಂತೆ ಜೀವ ಬೆದರಿಕೆ ಹಾಕಿದ್ದ. ಆರೋಪಿ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
©2021 Tulunada Surya | Developed by CuriousLabs