ಉಡುಪಿ: ಅಕ್ರಮವಾಗಿ ವಾಹನಕ್ಕೆ ಲೋಡ್ ಮಾಡುತ್ತಿದ್ದ ಪಟಾಕಿಗಳನ್ನು ಉಡುಪಿ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಆರೋಪಿ ಬಡಾನಿಡಿಯೂರಿನ ಪ್ರಕಾಶ್ ಎಂಬಾತ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೆ ಹಾಗೂ ಪರವಾನಿಗೆ ಇಲ್ಲದೇ ಅಕ್ರಮವಾಗಿ ಪಟಾಕಿ ಸ್ಫೋಟಕಗಳನ್ನು ಅಪಾಯಕಾರಿ ರೀತಿಯಲ್ಲಿ ದಾಸ್ತಾನು ಇಟ್ಟುಕೊಂಡಿದ್ದು, ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ದಾಳಿ ನಡೆಸಿದ ಪೊಲೀಸರು ಒಟ್ಟು 455ಕೆ.ಜಿ ತೂಕದ 87,500ರೂ. ಮೌಲ್ಯದ ಪಟಾಕಿ ಸುಡುಮದ್ದುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ತಮಿಳುನಾಡಿನ ಶಿವಕಾಶಿಯ ಫ್ಯಾಕ್ಟರಿಯವರು ಪರವಾನಿಗೆ ಇಲ್ಲದ ವ್ಯಕ್ತಿಗೆ ಅಕ್ರಮವಾಗಿ ಪಟಾಕಿ ಸ್ಫೋಟಕಗಳನ್ನು ಮಾನವ ಪ್ರಾಣಕ್ಕೆ ಅಪಾಯ ಉಂಟಾಗುವ ರೀತಿಯಲ್ಲಿ ಮಾರಾಟ ಮಾಡಿರುವುದಾಗಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
©2021 Tulunada Surya | Developed by CuriousLabs