ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲೇಡಿಸ್ ಹ್ಯಾಂಡ್ ಬ್ಯಾಗ್ ಮೆಟಲ್ ರಾಡ್ನೊಳಗೆ ಬಚ್ಚಿಟ್ಟು ಅಕ್ರಮ ಸಾಗಾಟದ 10.25 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ದುಬೈನಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕನ ತಪಾಸಣೆ ವೇಳೆ ಅನುಮಾನ ಬಂದಿದೆ. ಈ ಹಿನ್ನೆಲೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಲೇಡಿಸ್ ಹ್ಯಾಂಡ್ ಬ್ಯಾಗ್ನ ಕೈಯಲ್ಲಿದ್ದ ಮೆಟಲ್ ರಾಡ್ನೊಳಗೆ ಬಿಚ್ಚಿಟ್ಟು ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.
ತಕ್ಷಣ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನನ್ನು ಹಾಗೂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಪ್ರಯಾಣಿಕನಿಂದ 10,25,066 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

