Thursday, October 10, 2024
spot_img
More

    Latest Posts

    ಮಂಗಳೂರು: ಕೋಟ್ಯಾಂತರ ರೂ. ಬೆಲೆಬಾಳುವ ಅಂಬರ್ ಗ್ರೀಸ್ ಮಾರಾಟ- ಮೂವರ ಬಂಧನ

    ಮಂಗಳೂರು : ಕೋಟ್ಯಾಂತರ ರೂಪಾಯಿ ಬೆಲೆಬಾಳುವ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು 1,62,80,000 ರೂ ಮೌಲ್ಯದ ಸೊತ್ತು ವಶ ಪಡೆಯಲಾಗಿದೆ.ಚಿಕ್ಕಮಗಳೂರು ತಮಿಳ್ ಕಾಲನಿಯ ಪ್ಯಾರೇಜಾನ್ ಸೇಟು(37), ವಿಟ್ಲದ ಬದ್ರುದ್ದೀನ್ ಬದ್ರು(28 ), ತಮಿಳುನಾಡಿನ ರಾಜೇಶ್.ಆರ್(22) ಬಂಧಿತ ಆರೋಪಿಗಳು.
    ನ. 25 ರಂದು ಮಂಗಳೂರು ನಗರದ ಪಂಪ್ ವೆಲ್ ಬಳಿಯ ಇಂಡಿಯಾನ ಆಸ್ಪತ್ರೆಯ ಹತ್ತಿರ 4 ಜನ ವ್ಯಕ್ತಿಗಳು ಸ್ವಿಪ್ಟ್ ಕಾರಿನಲ್ಲಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್) ಎಂಬ ಬೆಲೆಬಾಳುವ ವನ್ಯ ಜೀವಿ ಉತ್ಪನ್ನವನ್ನು ಗಿರಾಕಿಗಳಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಮೂರು ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
    ಆರೋಪಿಗಳಿಂದ 1,57,50,000 ರೂ ಮೌಲ್ಯದ 1.575 ಕೆಜಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್), ಕಾರು ಹಾಗೂ ಮೊಬೈಲ್ ಫೋನ್‌ ವಶಪಡಿಸಿಕೊಳ್ಳಲಾಗಿದೆ.ಈ ಪತ್ತೆ ಕಾರ್ಯವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಐಪಿಎಸ್ ರವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಐಪಿಎಸ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ರವರ ನೇತೃತ್ವದಲ್ಲಿ ಈ ಆರೋಪಿಗಳ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿಯವರು ಪಾಲ್ಗೋಂಡಿದ್ದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss