Monday, July 15, 2024
spot_img
More

  Latest Posts

  ಬೆಳ್ತಂಗಡಿ: ಬಿಜೆಪಿ ಕಾರ್ಯಕರ್ತರಿಂದ ಅಕ್ರಮವಾಗಿ ಗೋ ಸಾಗಾಟ – ನಾಲ್ವರ ಬಂಧನ

  ಬೆಳ್ತಂಗಡಿ: ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ದನ-ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಸಕ್ರಿಯ ಬಿಜೆಪಿ ಕಾರ್ಯಕರ್ತರೆನ್ನಲಾದ ಬೆಳ್ತಂಗಡಿ ತಾಲೂಕಿನ ಪ್ರಮೋದ್ ಸಾಲ್ಯಾನ್, ಪುಷ್ಪರಾಜ್ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ, ಅರಕಲಗೂಡು ನಿವಾಸಿ ಚೆನ್ನಕೇಶವ ಮತ್ತು ಹೊಳೆನರಸೀಪುರ ನಿವಾಸಿ ಸಂದೀಪ್ ಹಿರೇಬೆಳಗುಳಿ ಬಂಧಿತ ಆರೋಪಿಗಳಾಗಿದ್ದಾರೆ. ಇವರಿಂದ ಸಾಗಾಟಕ್ಕೆ ಬಳಸಿದ ಮೂರು ವಾಹನಗಳು, 6 ದನ ಮತ್ತು 2 ಗಂಡು ಕರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಧರ್ಮಸ್ಥಳ ಠಾಣೆಯ ಎಸ್‌ಐ ಅನಿಲ್ ಕುಮಾರ್ ನೇತೃತ್ವದ ತಂಡ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿತ್ತು. ರಾತ್ರಿ 8:45ರ ಸುಮಾರಿಗೆ ಉಜಿರೆ ಕಡೆಯಿಂದ ಧರ್ಮಸ್ಥಳದತ್ತ ಬರುತ್ತಿದ್ದ ಎರಡು ಪಿಕಪ್ ಸೇರಿದಂತೆ ಮೂರು ವಾಹನಗಳಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ವಾಹನದಲ್ಲಿದ್ದವರನ್ನು ಪೊಲೀಸರು ವಿಚಾರಿಸಿದಾಗ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವಾಹನ ಸಹಿತ ಜಾನುವಾರುಗಳನ್ನು ವಶಪಡಿಸಿಕೊಂಡು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss