ಉಡುಪಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ, ಮುಂದಿನ ನಾಲ್ಕು ದಿನ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ಚಂಡಮಾರುತದ ಎಚ್ಚರಿಕೆಯನ್ನು ನೀಡಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯುವುದನ್ನು ನಿಷೇಧಿಸಲಾಗಿದೆ.
ಈ ಕುರಿತಂತೆ ಉಡುಪಿ ಜಿಲ್ಲಾಡಳಿತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಕರಾವಳಿ ಭಾಗದಲ್ಲಿ ನಾಲ್ಕು ದಿನ ಚಂಡಮಾರುತ ಇರಲಿದೆ. ಇದರಿಂದ ಭಾರೀ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದಾಗಿ ತಿಳಿಸಿದೆ.
ಬಿರುಗಾಳಿ ಸಹಿತ ಭಾರೀ ಚಂಡಮಾರುತದ ಪರಿಣಾಮ, ಮೀನುಗಾರರು ಸಮುದ್ರಕ್ಕೆ ಇಳಿಯುವುದು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪ್ರವಾಸಿಗರು, ಸ್ಥಳೀಯರು ಸಮುದ್ರ, ನದಿ ತೀರಕ್ಕೆ ತೆರಳದಂತೆ ಸೂಚಿಸಿದೆ.
ಇನ್ನೂ ತಗ್ಗು ಪ್ರದೇಶದ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆಯೂ ಉಡುಪಿ ಜಿಲ್ಲಾಡಳಿತವು ಪ್ರಕರಣಯಲ್ಲಿ ಮುನ್ಸೂಚನೆ ನೀಡಿದೆ.