Sunday, September 15, 2024
spot_img
More

    Latest Posts

    ಆ.27 ರಂದು ಉಳ್ಳಾಲ ತಾಲೂಕು ಪತ್ರಕರ್ತರ ಸಂಘದ ಉದ್ಘಾಟನಾ ಸಮಾರಂಭ

    ಉಳ್ಳಾಲ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಉಳ್ಳಾಲ ತಾಲೂಕು ಘಟಕ ಇದರ ಉದ್ಘಾಟನಾ ಸಮಾರಂಭ ಆ.27 ರಂದು ಭಾನುವಾರ ಸಂಜೆ 3.00 ಗಂಟೆಗೆ ತೊಕ್ಕೊಟ್ಟು ಅಂಬಿಕಾರೋಡಿನ ಗಟ್ಟಿ ಸಮಾಜ ಭವನದಲ್ಲಿ ನೆರವೇರಲಿದೆ ಎಂದು ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಸಂತ್ ಎನ್.ಕೊಣಾಜೆ ಹೇಳಿದ್ದಾರೆ. ತೊಕ್ಕೊಟ್ಟುವಿನಲ್ಲಿರುವ ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಉದ್ಘಾಟನೆ ನೆರವೇರಿಸಲಿದ್ದಾರೆ. ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲು ಪತ್ರಕರ್ತರ ಕ್ಷೇಮಾಭಿವೃದ್ಧಿ ಯೋಜನೆಗೆ ಚಾಲನೆ ನೀಡಲಿದ್ದಾರೆ.ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಗ್ರಾಮಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ(ರಿ.) ಅಧ್ಯಕ್ಷರಾದ ಶಿವಾನಂದ ತಗಡೂರು ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಸೈಯದ್ ಮದನಿ ದರ್ಗಾ ಸಮಿತಿ ಅಧ್ಯಕ್ಷರಾದ ಹನೀಫ್ ಹಾಜಿ, ಪೆರ್ಮನ್ನೂರು ಸಂತ ಸೆಬೆಸ್ತಿಯನ್ನರ ಚರ್ಚಿನ ಧರ್ಮಗುರುಗಳಾದ ಫಾ.ಸಿಪ್ರಿಯನ್ ಮೊಂತೇರೊ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ, ಶಾಸಕರಾದ ಡಾ.ವೈ ಭರತ್ ಶೆಟ್ಟಿ, ಡಿ.ವೇದವ್ಯಾಸ ಕಾಮತ್, ಎ.ಕೆ ಎಂ ಅಶ್ರಫ್, ವಿಧಾನಪರಿಷತ್ ಸದಸ್ಯರುಗಳಾದ ಹರೀಶ್ ಕುಮಾರ್, ಮಂಜುನಾಥ್ ಭಂಡಾರಿ, ಪ್ರತಾಪಸಿಂಹ ನಾಯಕ್, ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಯೆನೆಪೋಯ ವಿ.ವಿ ಕುಲಾಧಿಪತಿ ವೈ.ಅಬ್ದುಲ್ಲಾ ಕುಂಞಿ, ಕಣಚೂರು ಸಮೂಹ ಸಂಸ್ಥೆಯ ಅಧ್ಯಕ್ಷ ಯು.ಕಣಚೂರು ಮೋನು , ನಿಟ್ಟೆ ವಿ.ವಿ ಆಡಳಿತ ವಿಭಾಗದ ಉಪಕುಲಾಧಿಪತಿ ವಿಶಾಲ್ ಹೆಗ್ಡೆ ,ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಜಿ. ರಾಜಾರಾಂ ಭಟ್, ಶಿವಾಸ್ ಮುಂಬೈ ಆಡಳಿತ ನಿರ್ದೇಶಕ ಶಿವರಾಮ್ ಭಂಡಾರಿ, ಕೋಟೆಕಾರು ವ್ಯ.ಸೇ.ಸ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನಕೋಟೆಕಾರುಗುತ್ತು , ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳೂರು ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ , ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ,‌ಕನ್ನಡಿಗ ಪತ್ರಕರ್ತರ ಸಂಘದ ಮಹಾರಾಷ್ಟ್ರ ಅಧ್ಯಕ್ಷ ರೋನ್ಸ್ ಬಂಟ್ವಾಳ ಮೊದಲಾದವರು ಭಾಗವಹಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮ: ಮದ್ಯಾಹ್ನ 3 ಗಂಟೆಯಿಂದ ಪತ್ರಕರ್ತರು ಹಾಗೂ ಖ್ಯಾತ ಗಾಯಕರಿಂದ ಕರೋಕೆ ಸಂಗೀತ ರಸಮಂಜರಿ, ಸಂಘದ ಸದಸ್ಯರ ಹಾಗೂ ಮಕ್ಕಳ ಭರತನಾಟ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.

    ಸುದ್ಧಿಗೋಷ್ಠಿಯಲ್ಲಿ ಉಳ್ಳಾಲ ತಾಲೂಕು ಘಟಕದ ಪ್ರ.ಕಾ ಶಶಿಧರ್ ಪೊಯ್ಯತ್ತಬೈಲ್, ಉಪಾಧ್ಯಕ್ಷರಾದ ದಿನೇಶ್ ನಾಯಕ್, ಕಾರ್ಯದರ್ಶಿ ಡಾ.ಸತೀಶ್ ಕೊಣಾಜೆ, ಪತ್ರಕರ್ತರಾದ ಗಣೇಶ್ ತಲಪಾಡಿ, ಆಸೀಫ್ ಬಬ್ಬುಕಟ್ಟೆ, ಮೋಹನ್ ಕುತ್ತಾರ್, ಶಿವಶಂಕರ್, ರಜನಿಕಾಂತ್ ಉಪಸ್ಥಿತರಿದ್ದರು. ಉದ್ಘಾಟನಾ ಕಾರ್ಯಕ್ರಮವು ಅಬ್ಬಕ್ಕ ಟಿ.ವಿ, ಪೊಸಕುರಲ್, ಚಾನೆಲ್‌ 9 ವಾಹಿನಿಗಳಲ್ಲಿ ನೇರಪ್ರಸಾರಗೊಳ್ಳಲಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss