ಮಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ (ರಿ.) ಮಂಗಳೂರು ಒಕ್ಕಲಿಗ ಯಾನೆ ಗೌಡರ ಸೇವಾ ಸಂಘ (ರಿ.) ಮಂಗಳೂರು ಮತ್ತು ಯುವ ಘಟಕ ಹಾಗೂ ಮಹಿಳಾ ಘಟಕ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ತುಳುನಾಡಿನ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಮುಂಭಾಗದಲ್ಲಿ ಇಂದು 77ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಮಾಡಿ ಸಂಭ್ರಮಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ನವೀನ್ ಡಿ ಸೋಜಾ, ಮಂಗಳೂರು ಮಹಾನಗರ ಪಾಲಿಕೆ ಮಾಜಿ ಅಧ್ಯಕ್ಷೆ ಪ್ರೇಮಾಂದ ಶೆಟ್ಟಿ, ಉಪಮೇಯರ್ ಪೂರ್ಣಿಮಾ, ರವಿಶಂಕರ್ ಮಿಜಾರ್ ಮಾಜಿ ಅಧ್ಯಕ್ಷ ಮೂಡ ಮಂಗಳೂರು, ತುಳುನಾಡ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು, ಗುರುದೇವ್ ಅದ್ಯಕ್ಷ ಒಕ್ಕಲಿಗ ಗೌಡ ಸೇವಾ ಸಂಘ ಮಂಗಳೂರು, ಬಾಲಕೃಷ್ಣ ಡಿಬಿ ಕಾರ್ಯದರ್ಶಿ, ಮೋಹನ್ ಕಲ್ಮಂಜ, ಒಕ್ಕಲಿಗ ಗೌಡ ಸೇವಾ ಸಂಘ ಮಂಗಳೂರು , ಮತ್ತು ಒಕ್ಕಲಿಗ ಯುವ ಘಟಕ ಮತ್ತು ಮಹಿಳಾ ಘಟಕದ ಸದಸ್ಯರು ಉಪಸ್ಥಿತರಿದ್ದರು.
ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು ಎಲ್ಲರನ್ನು ಸ್ವಾಗತಿಸಿದರು, ರಕ್ಷಿತ್ ಪುತ್ತಿಲ ಧನ್ಯವಾದ ಸಲ್ಲಿಸಿದರು.