Saturday, July 27, 2024
spot_img
More

    Latest Posts

    ಇನ್ಮುಂದೆ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿ ನಿಷೇಧ!

    ಬೆಂಗಳೂರು: ಸರ್ಕಾರಿ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿ ನಿಷೇಧಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ (ಸಿಎಸ್​) ಅವರು ಸುತ್ತೋಲೆ ಹೊರಡಿಸಿದ್ದಾರೆ.

    ರಾಜ್ಯಾದ್ಯಂತ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿನ (Single use packaged water bottles) ನೀರಿನ ಬಳಕೆ/ಸರಬರಾಜು ಮಾಡುವುದನ್ನು ನಿಷೇಧಿಸಿ ಕೆಲ ವರ್ಷಗಳ ಹಿಂದೆಯೇ ಆದೇಶಿಸಲಾಗಿತ್ತು. 

    ಇಂತಹ ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭ ಅನುಸಾರ ಶುಚಿತ್ವ ರೀತಿಯಲ್ಲಿ ಗ್ಲಾಸ್, ಸ್ಟೀಲ್ (ಪ್ಲಾಸ್ಟಿಕ್ ಅಲ್ಲದ) ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸುವಂತೆ ಸೂಚಿಸಿಲಾಗಿತ್ತು.‌ ಸೂಕ್ತ ಸಾಮೂಹಿಕ ಕುಡಿಯುವ ನೀರು ವಿತರಣಾ ವ್ಯವಸ್ಥೆಯನ್ನು (Common drinking water dispensing system) ಏರ್ಪಡಿಸುವಂತೆ ಸೂಚಿಸಲಾಗಿತ್ತು.

    ಆದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರದ ವತಿಯಿಂದ ಅಥವಾ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಮೇಲಿನ ಉಲ್ಲೇಖಿತ ಸರ್ಕಾರದ ಆದೇಶದ ಸೂಚನೆಯನ್ನು ಪಾಲಿಸುತ್ತಿಲ್ಲ ಎಂಬುದು ಗಮನಕ್ಕೆ ಬಂದಿದೆ. ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಪ್ಲಾಸ್ಟಿಕ್ ಬಾಟಲಿಗಳಲ್ಲಿ ವಿತರಿಸುತ್ತಿರುವುದು ಸಮರ್ಥನೀಯವಲ್ಲ ಎಂದು ಮುಖ್ಯ ಕಾರ್ಯದರ್ಶಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಈ ಹಿನ್ನೆಲೆ ಇನ್ನುಮುಂದೆ ಎಲ್ಲ ಸಭೆ-ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್‌ನಲ್ಲಿ ನೀರಿನ ಬಳಕೆ/ಸರಬರಾಜು ಮಾಡುವುದನ್ನು ನಿಲ್ಲಿಸುವಂತೆ ಹಾಗೂ ನಿಗದಿಪಡಿಸಿದಂತೆ ಕುಡಿಯುವ ನೀರಿನ ವಿತರಣಾ ವ್ಯವಸ್ಥೆಯನ್ನು ಕಲ್ಪಿಸಿಕೊಳ್ಳುವಂತೆ ಸಿಎಸ್ ಸೂಚಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss