ಕೆರೆಕಾಡು: ಇಲ್ಲಿಗೆ ಸಮೀಪದ ಕೆರೆಕಾಡು ಕೋರ್ದಬ್ಬು ದೈವಸ್ಥಾನದ ಬಳಿ ಗಾಳಿಗೆ ತೆಂಗಿನ ಮರ ಮನೆಯ ಮೇಲೆ ಬಿದ್ದು ಮನೆ ಬಳಿ ನಿಂತಿದ್ದ ಮಹಿಳೆಗೂ ತಾಗಿ ಗಂಭೀರ ಗಾಯಗೊಂಡು ಸುರತ್ಕಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ
ಗಾಯಾಳು ಮಹಿಳೆಯನ್ನು ಸ್ಥಳೀಯ ನಿವಾಸಿ ಸವಿತಾ ಶೆಟ್ಟಿಗಾರ್ ಎಂದು ಗುರುತಿಸಲಾಗಿದೆ. ಮರ ಬಿದ್ದ ರಭಸಕ್ಕೆ ಮನೆ ಬಿದ್ದು, ತೆಂಗಿನ ಮರದ ತುಂಡು ಮಹಿಳೆಯ ಕಾಲಿಗೆ ತಾಗಿ ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ.