Thursday, October 10, 2024
spot_img
More

    Latest Posts

    ಬೆಳ್ತಂಗಡಿ: ಇನ್ನೋವಾ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ- ಬೈಕ್ ಸವಾರ ಸಾವು

    ಬೆಳ್ತಂಗಡಿ: ಇನ್ನೋವಾ ಕಾರು ಹಾಗೂ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕಾಪಿನಡ್ಕದಲ್ಲಿ ಸಂಭವಿಸಿದೆ.
    ಮೃತ ಬೈಕ್‌ ಸವಾರನನ್ನು ಕಾರ್ಕಳ ತಾಲೂಕಿನ ಈದು ಗ್ರಾಮದ ಸುಧೀರ್‌ ಎಂದು ಗುರುತಿಸಲಾಗಿದೆ.

    ಬೆಳ್ತಂಗಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನೋವಾ ಕಾರು ಹಾಗೂ ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್‌ ನಡುವೆ ಢಿಕ್ಕಿ ಸಂಭವಿಸಿದ್ದು, ಢಿಕ್ಕಿ ರಭಸಕ್ಕೆ ಬೈಕ್‌ ಸವಾರ ರಸ್ತೆಗೆ ಎಲೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ಇನ್ನು ತಕ್ಷಣ ಬೈಕ್‌ ಸವಾರನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss