Saturday, April 20, 2024
spot_img
More

    Latest Posts

    ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ನಾಳೆ ಉಡುಪಿಯಲ್ಲಿ ‘ನೇರ ಸಂದರ್ಶನ’

    ಉಡುಪಿ : ನೀವು ಕೆಲಸ ಹುಡುಕುತ್ತಿದ್ದೀರಾ..ಇನ್ನೂ ಕೆಲಸ ಸಿಕ್ಕಿಲ್ವಾ..ಹಾಗಾದರೆ ನಾಳೆ ಉಡುಪಿಯಲ್ಲಿ ನಡೆಯಲಿರುವ ಉದ್ಯೋಗ ಮೇಳದಲ್ಲಿ ಭಾಗಿಯಾಗಿ ಉದ್ಯೋಗ ಗಿಟ್ಟಿಸಿಕೊಳ್ಳಿ.

    ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಆಗಸ್ಟ್ 25 ರಂದು ಬೆಳಗ್ಗೆ 10.30 ಕ್ಕೆ ನಗರದ ಬನ್ನಂಜೆ ರೋಡ್ ಶ್ರೀರಾಮ್ ಬಿಲ್ಡಿಂಗ್ 2 ನೇ ಮಹಡಿಯ ಮಹೀಂದ್ರ ರೂರಲ್ ಹೌಸಿಂಗ್ ಪ್ರೆ,ಲಿ.

    ಇಲ್ಲಿ ನೇರ ಸಂದರ್ಶನ ನಡೆಯಲಿದೆ.

    ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಡಿಪ್ಲೋಮಾ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಹಾಗೂ ಮುಖ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ಹೊರಡಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss