Saturday, July 27, 2024
spot_img
More

    Latest Posts

    ಉಡುಪಿ: ವಿಡಿಯೋ ಪ್ರಕರಣದ ತನಿಖಾಧಿಕಾರಿ ಬದಲಾವಣೆ- ಡಿವೈಎಸ್ ಪಿ ಬೆಳ್ಳಿಯಪ್ಪ ನೇಮಕ

    ಉಡುಪಿ: ಕಾಲೇಜೊಂದರ ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಬದಲಾವಣೆ ಮಾಡಲಾಗಿದೆ.

    ಈ ಮೊದಲು ತನಿಖೆ ಮಾಡುತ್ತಿದ್ದ ಮಲ್ಪೆ ಇನ್ ಸ್ಪೆಕ್ಟರ್ ಮಂಜುನಾಥ್ ಗೌಡ ಅವರ ಬದಲು ಕುಂದಾಪುರ ಡಿವೈಎಸ್ ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.

    ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದ ಮಲ್ಪೆ ಠಾಣೆಯ ಇನ್ ಸ್ಪೆಕ್ಟರ್ ಮಂಜುನಾಥ ಗೌಡ ಅವರನ್ನು ವರ್ಗಾಯಿಸಬೇಕೆಂಬ ಆಗ್ರಹ ಕೇಳಿ ಬಂದ ಹಿನ್ನೆಲೆ ಇಂದು ಅಧಿಕಾರಿಯನ್ನು ಬದಲಾಯಿಸಿ ಆದೇಶಿಸಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss