ಬೆಂಗಳೂರು: ಹಿರಿಯ ಪೊಲೀಸ್ ಅಧಿಕಾರಿ ಆರ್ ದಿಲಿಪ್ ಅವರು ಹೃಹಯಘಾತದಿಂದ ನಿಧನರಾಗಿದ್ದಾರೆ.
ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದ 53 ವರ್ಷದ ದಿಲೀಪ್ ಅನಾರೋಗ್ಯದಿಂದ ಬಳಲುತಿದ್ದರು. ಬೆಂಗಳೂರು ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಯಲ್ಲಿ ಇಂದು ಶುಕ್ರವಾರ ನಿಧನರಾದರು.
ಸಿಐಡಿ ಆರ್ಥಿಕ ವಿಭಾಗದ ಡಿಐಜಿಪಿ ಆಗಿ ಕೆಲಸ ಮಾಡುತ್ತಿದ್ದ ಇವರು, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯನ್ನೂ ಮಾಡಿಸಿಕೊಂಡಿದ್ದರು. ಬಿಇ ಪದವೀಧರರಾಗಿದ್ದ ದಿಲೀಪ್ ಅವರು 2005ರಲ್ಲಿ ಪೊಲೀಸ್ ಸೇವೆಗೆ ಸೇರಿದ್ದರು. ದಕ್ಷಿಣ ಕನ್ನಡ, ಧಾರವಾಡ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳ ಎಸ್ಪಿ ಆಗಿ ಕರ್ತವ್ಯ ನಿರ್ವಹಿಸಿದ್ದರು. ಹುಬ್ಬಳ್ಳಿ–ಧಾರವಾಡ ಕಮಿಷನರ್ ಆಗಿಯೂ ದಿಲೀಪ್ ಅವರು ಸೇವೆ ಸಲ್ಲಿಸಿದ್ದರು.
