ಬೆಂಗಳೂರು : ಆದಾಯ ತೆರಿಗೆ ವಂಚನೆ ಆರೋಪದ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಆಸ್ಪತ್ರೆ ಹಾಗೂ ಡಯಾಗ್ನಸ್ಟಿಕ್ ಕೇಂದ್ರಗಳ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮುಂಬೈನಿಂದ ಧಾವಿಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ಬೆಳಗ್ಗೆ ಬೆಂಗಳೂರು ನಗರ, ಹುಬ್ಬಳ್ಳಿ ಹಾಗೂ ಬೆಳಗಾವಿ ಸೇರಿದಂತೆ ಪ್ರಮುಖ ನಗರಗಳಲ್ಲಿನ ಕೆಲವು ಆಸ್ಪತ್ರೆಗಳು ಮತ್ತು ಡಯಾಗ್ನಸ್ಟಿಕ್ ಸೆಂಟರ್ಗಳ ಮೇಲೆ ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸರ್ಕಾರಕ್ಕೆ ರೋಗಿಗಳ ಸುಳ್ಳು ಮಾಹಿತಿ ನೀಡಿ ಸರ್ಕಾರದಿಂದ ಕೆಲವು ಆಸ್ಪತ್ರೆಗಳು ಹೆಚ್ಚಿನ ಹಣ ಪಡೆದಿವೆ. ಈ ಆರೋಪದ ಮೇರೆಗೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ದಾಳಿ ನಡೆಸಿದ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡು ಆಸ್ಪತ್ರೆ ಸಿಬ್ಬಂದಿ ಹಾಗೂ ಡಯಾಗ್ನಸ್ಟಿಕ್ ಕೇಂದ್ರಗಳ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
