ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಸಹಕಾರಿ ಧುರೀಣರು, ಜನತಾದಳ (ಜಾತ್ಯತೀತ) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಜಾಕೆ ಮಾಧವ ಗೌಡ ಅವರು ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ದೀರ್ಘಕಾಲದ ಗಣನೀಯ ಸೇವೆ ಹಾಗೂ ಅಪಾರ ಕೊಡುಗೆಯನ್ನು ಗುರುತಿಸಿ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ‘ರಾಜ್ಯ ಸಹಕಾರ ರತ್ನ ಪ್ರಶಸ್ತಿ’ಗೆ ಭಾಜನರಾಗಿದ್ದು, ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
73ನೇ ಅಖಿಲ ಭಾರತ ಸಹಕಾರ ಸಪ್ತಾಹ–2026ರ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.) ಹಾಗೂ ತುಳುನಾಡ ಸೂರ್ಯ ಪತ್ರಿಕೆಯ ಜಂಟಿ ಆಶ್ರಯದಲ್ಲಿ ನವೆಂಬರ್ 17ರಂದು ಮಂಗಳೂರಿನ ಉರ್ವಸ್ಟೋರ್ನ ತುಳುಭವನದಲ್ಲಿ ಸಂಜೆ 3.30 ಕ್ಕೆ ನಡೆಯಲಿರುವ ರಾಜ್ಯಮಟ್ಟದ ಅದ್ದೂರಿ ‘ಸಹಕಾರಿ ಸಪ್ತಾಹ ಮತ್ತು ತೌಳವ ಸಹಕಾರಿ ಪ್ರಶಸ್ತಿ ಪ್ರದಾನ ಸಮಾರಂಭ’ದಲ್ಲಿ ಜಾಕೆ ಮಾಧವ ಗೌಡ ಅವರಿಗೆ ‘ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ–2026’ ಪ್ರದಾನ ಮಾಡಿ ಗೌರವಿಸಲಾಗುವುದು.

ರಾಜಕೀಯ ಕ್ಷೇತ್ರದಲ್ಲಿ 1970ರ ದಶಕದಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಹಾಗೂ 1979ರಿಂದ 2007ರವರೆಗೆ ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್ನ ನಿರ್ದೇಶಕರಾಗಿ ಜವಾಬ್ದಾರಿಗಳನ್ನು ನಿರ್ವಹಿಸಿದ್ದೀರಿ. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷರಾಗಿ ಹಾಗೂ ಗಡಿ ರಕ್ಷಣೆ ಮತ್ತು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಭಾಷೆ, ಸಾಹಿತ್ಯ ಮತ್ತು ಗಡಿನಾಡಿನ ಅಭಿವೃದ್ಧಿಯ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿರತ್ತಾರೆ.
ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಪಂಬೆತ್ತಾಡಿ ಯುವಕ ಮಂಡಲ, ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಲ, ಪಂಜ ಜೇಸಿಐ , ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಮೂಲಕ ಸಮಾಜಮುಖಿ ಚಟುವಟಿಕೆಗಳಿಗೆ ಬೆಂಬಲ ನೀಡಿದ್ದೀರಿ. ಪಂಜ ಮಂಡಲ ಪಂಚಾಯತ್ ಹಾಗೂ ಸುಳ್ಯ ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕೂ ಶ್ರಮಿಸಿರುತ್ತಾರೆ.
ಸಹಕಾರಿ ಕ್ಷೇತ್ರದಲ್ಲಿ ತಮ್ಮ ಸೇವೆ ಮತ್ತು ಸಾಧನೆಗಳು ಅನುಕರಣೀಯ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಉಪಾಧ್ಯಕ್ಷರಾಗಿ, ಕಲ್ಮಡ್ಕ ಸೇವಾ ಸಹಕಾರಿ ಬ್ಯಾಂಕ್ನ ಅಧ್ಯಕ್ಷರಾಗಿ (1993–1999), ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್ನ ಅಧ್ಯಕ್ಷರಾಗಿ (1985–1991) ತಾಲೂಕು ಮಾರ್ಕೇಂಟಿಂಗ್ ಸೊಸೈಟಿ ಸುಳ್ಯ ಎರಡು ಬಾರಿ ಅದ್ಯಕ್ಷ ರಾಗಿ APMC ಸುಳ್ಳ ಅದ್ಯಕ್ಷರಾಗಿ ಹಾಗೂ ವಿವಿಧ ಸಹಕಾರಿ ಸಂಸ್ಥೆಗಳ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಸಹಕಾರಿ ಚಳವಳಿಯ ಬೆಳವಣಿಗೆಗೆ ಅಮೂಲ್ಯ ಕೊಡುಗೆ ನೀಡಿರತ್ತಾರೆ
ಕಲ್ಮಡ್ಕ ಸೇವಾ ಸಹಕಾರಿ ಬ್ಯಾಂಕ್ನಲ್ಲಿ 21 ವರ್ಷಗಳ ಕಾಲ ನಿರ್ದೇಶಕರಾಗಿ ಹಾಗೂ 10 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ತಮ್ಮ ಅಧ್ಯಕ್ಷತೆಯ ಅವಧಿಯಲ್ಲಿ ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಶೇ.100ರಷ್ಟು ಸಾಲ ವಸೂಲಾತಿಯ ಸಾಧನೆ ಮಾಡಿದ ಬ್ಯಾಂಕಿನ ಅಧ್ಯಕ್ಷರೆಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ತಮ್ಮ ದಕ್ಷ ಆಡಳಿತ ಮತ್ತು ಆರ್ಥಿಕ ಶಿಸ್ತಿಗೆ ಸಾಕ್ಷಿಯಾಗಿದೆ. ಈ ಸಾಧನೆಯನ್ನು ಮುಂದುವರಿಸಿದ ಸಂಸ್ಥೆಯು ಜಿಲ್ಲಾ ಮಟ್ಟದಲ್ಲಿ ಹಾಗೂ ನಬಾರ್ಡ್ನಿಂದ ಪ್ರಶಸ್ತಿಗಳನ್ನು ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ.
ಪಂಬೆತ್ತಾಡಿ ಸಹಕಾರಿ ವ್ಯವಸಾಯ ಸಂಘದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಕೇವಲ ಒಂದು ವರ್ಷದೊಳಗೆ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಬ್ಯಾಂಕ್ ಹಾಗೂ ಗೋದಾಮು ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದು, ಸಂಘದ ಅಭಿವೃದ್ಧಿಗೆ ಹೊಸ ಆಯಾಮ ನೀಡಿದ್ದೀರಿ. ಈ ಸಾಧನೆಗೆ ಜಿಲ್ಲಾ ಮಟ್ಟದ ಪ್ರಶಸ್ತಿಯೂ ಸಂದಿರುವುದು ಸ್ಮರಣೀಯ.
ಸುಳ್ಯ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರಿ ಸಂಘ,ಪಂಬೆತ್ತಾಡಿ ವ್ಯವಸಾಯ ಸಹಕಾರಿ ಬ್ಯಾಂಕ್, ಜಿಲ್ಲಾ ತೋಟಗಾರಿಕಾ ಸಹಕಾರಿ ಸಂಘ, ತಾಲೂಕು ಮಾರ್ಕೆಟಿಂಗ್ ಸೊಸೈಟಿ, ಗಿರಿಜನ ಅಭಿವೃದ್ಧಿ ಸಹಕಾರ ಸಂಘ ಹಾಗೂ ತಾಲೂಕು ಮಹಿಳಾ ಅಭಿವೃದ್ಧಿ ಸಹಕಾರ ಸಂಘ ಸೇರಿದಂತೆ ಹಲವು ಸಂಸ್ಥೆಗಳ ಮೂಲಕ ಸಹಕಾರಿ ಕ್ಷೇತ್ರದ ವಿಸ್ತರಣೆ ಮತ್ತು ಗ್ರಾಮೀಣ ಆರ್ಥಿಕ ಅಭಿವೃದ್ಧಿಗೆ ಶ್ರಮಿಸಿರುತ್ತಾರೆ
ಸಾಕ್ಷರತಾ ಆಂದೋಲನದಲ್ಲಿ ತಮ್ಮ ಪಾತ್ರ ವಿಶೇಷವಾಗಿ ಸ್ಮರಣೀಯ. ಪಂಜ ಪರಿಸರದಲ್ಲಿ ನಡೆದ ಸಾಕ್ಷರತಾ ಆಂದೋಲನದಲ್ಲಿ ಪ್ರಮುಖ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿ, ಜನರಲ್ಲಿ ಶಿಕ್ಷಣ ಮತ್ತು ಸಾಕ್ಷರತೆಯ ಅರಿವು ಮೂಡಿಸಿದ್ದೀರಿ. ತಮ್ಮ ಸಂಘಟನಾ ಸಾಮರ್ಥ್ಯ, ಜನಸಂಪರ್ಕ ಮತ್ತು ನಿರಂತರ ಪ್ರಯತ್ನಗಳ ಫಲವಾಗಿ ಸಾಕ್ಷರತಾ ಆಂದೋಲನದಲ್ಲಿ ಸುಳ್ಯ ತಾಲೂಕು ಪ್ರಥಮ ಸ್ಥಾನ ಗಳಿಸಲು ಸಾಧ್ಯವಾಗಿರುವುದು ತಮ್ಮ ಸಮಾಜಮುಖಿ ಸೇವೆಯ ಮಹತ್ವವನ್ನು ಸಾರುತ್ತದೆ.
ಸಹಕಾರಿ ಕ್ಷೇತ್ರದ ಅಭಿವೃದ್ಧಿ, ಸಹಕಾರ ಸಂಸ್ಥೆಗಳ ಬಲವರ್ಧನೆ, ಜನಸಾಮಾನ್ಯರಲ್ಲಿ ಸಹಕಾರ ಮನೋಭಾವ ಬೆಳೆಸುವುದು ಹಾಗೂ ಸಹಕಾರಿ ಚಳವಳಿಯ ಆಶಯಗಳನ್ನು ಸಮಾಜದ ತಳಮಟ್ಟದವರೆಗೆ ತಲುಪಿಸುವ ನಿಟ್ಟಿನಲ್ಲಿ ಅವರು ಸಲ್ಲಿಸಿರುವ ಸೇವೆ ಪ್ರಶಂಸನೀಯವಾಗಿದೆ. ಸಹಕಾರಿ ಕ್ಷೇತ್ರದ ಹಿರಿಯ ಅನುಭವಿಯಾಗಿ ಗುರುತಿಸಿಕೊಂಡಿರುವ ಅವರು, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿಯೂ ತಮ್ಮದೇ ಆದ ಗುರುತನ್ನು ಮೂಡಿಸಿಕೊಂಡಿದ್ದಾರೆ.
ಪ್ರತಿಷ್ಠಿತ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿಗೆ ಆಯ್ಕೆ
ಸಹಕಾರ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿರುವ ಹಿರಿಯ ಸಾಧಕರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ರಾಜ್ಯದ ಪ್ರತಿಷ್ಠಿತ ‘ಸಹಕಾರ ರತ್ನ’ ಪ್ರಶಸ್ತಿಗೆ ಭಾಜನರಾಗಿರುವ ಜಾಕೆ ಮಾಧವ ಗೌಡ ಅವರನ್ನು ಪ್ರತಿಷ್ಠಿತ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿದೆ.
ಈ ಸಮಾರಂಭದಲ್ಲಿ ಸಹಕಾರಿ ಕ್ಷೇತ್ರದ ಗಣ್ಯರು, ಜನಪ್ರತಿನಿಧಿಗಳು, ವಿವಿಧ ಸಹಕಾರಿ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಪ್ರಮುಖರು ಭಾಗವಹಿಸಲಿದ್ದಾರೆ. ಸಹಕಾರ ಕ್ಷೇತ್ರದ ಸಾಧಕರಿಗೆ ಗೌರವ ಸಲ್ಲಿಸುವುದರ ಜೊತೆಗೆ ಸಹಕಾರಿ ಚಳವಳಿಯ ಮಹತ್ವ, ಅದರ ಸಾಮಾಜಿಕ ಜವಾಬ್ದಾರಿ ಮತ್ತು ಭವಿಷ್ಯದ ಬೆಳವಣಿಗೆಗಳ ಕುರಿತು ಚಿಂತನ-ಮಂಥನ ನಡೆಯಲಿದೆ.
ಸಹಕಾರದಿಂದ ಸಮೃದ್ಧಿ – ಸಹಭಾಗಿತ್ವದಿಂದ ಅಭಿವೃದ್ಧಿ ಎಂಬ ಆಶಯದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮವು ಕರಾವಳಿಯ ಸಹಕಾರಿ ಕ್ಷೇತ್ರಕ್ಕೆ ಹೊಸ ಪ್ರೇರಣೆ ನೀಡುವ ನಿರೀಕ್ಷೆಯಿದೆ.
ರಾಜ್ಯ ಸಹಕಾರ ರತ್ನ ಪ್ರಶಸ್ತಿಯನ್ನು ಪಡೆದ ಬೆನ್ನಲ್ಲೇ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿಗೂ ಆಯ್ಕೆಯಾಗಿರುವ ಜಾಕೆ ಮಾಧವ ಗೌಡ ಅವರಿಗೆ ಜಿಲ್ಲೆಯ ವಿವಿಧ ಸಹಕಾರಿ ಸಂಘ-ಸಂಸ್ಥೆಗಳ ಪ್ರಮುಖರು, ರಾಜಕೀಯ ಮುಖಂಡರು, ಅಭಿಮಾನಿಗಳು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.





