Thursday, October 10, 2024
spot_img
More

    Latest Posts

    ಮಂಗಳೂರು: ಜನವರಿ 03ರಂದು ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕದ ಪ್ರತಿಭಟನಾ ಸಭೆ

    ಮಂಗಳೂರು: ಆಯುರ್ವೇದ (B.A.M.S) ವೈದ್ಯರುಗಳ ಬಹುದಿನಗಳ ಬೇಡಿಕೆಯಾದ ಮೂಲ ಪದ್ದತಿಯೊಂದಿಗೆ ಅವಶ್ಯಕ ಪ್ರಾಥಮಿಕ ಹಂತದ ಅಲೋಪತಿ ಔಷಧಗಳನ್ನು ನೀಡಲು ಅನುಮತಿ ಒತ್ತಾಯಿಸಿ ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕ ವತಿಯಿಂದ ಸ್ಥಾಪಕ ಅದ್ಯಕ್ಷರಾದ ಯೋಗಿಶ್ ಶೆಟ್ಟಿ ಜಪ್ಪು ರವರ ನೇತೃತ್ವದಲ್ಲಿ ಮಂಗಳೂರಿನ ಮಿನಿ ವಿಧಾನಸೌಧ ಎದುರು ಕ್ಲಾಕ್ ಟವರ್ ಬಳಿ ದಿನಾಂಕ 03-01-2024 ಬುಧವಾರ ಬೆಳ್ಳಿಗೆ 11.00 ರಿಂದ ಪ್ರತಿಭಟನೆ ಸಭೆ ನಡೆಯಲಿದೆ.

    ಬಳಿಕ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಮತ್ತು ಇತರರಿಗೆ ಮನವಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಂಘಟನೆಯ ಪ್ರಮುಖ ಪದಾಧಿಕಾರಿಗಳು ಆಗಮಿಸಲಿದ್ದಾರೆ.

    ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೇರೆ ಬೇರೆ ಆಯುರ್ವೇದ ವೈದ್ಯರ ಸಂಘ ಹಾಗೂ ಇತರ ಸಂಘ ಸಂಸ್ಥೆಗಳ ಬೆಂಬಲದೊಂದಿಗೆ ಪ್ರತಿಭಟನೆ ಹಾಗೂ ಹಕ್ಕೊತ್ತಾಯ ಸಭೆಗಳು ನಡೆಯಲಿವೆ.
    ಬರುವ ಮೇ ತಿಂಗಳಲ್ಲಿ ವೈದ್ಯರ ಹಲವಾರು ಬೇಡಿಕೆಗಳನ್ನು ಸರಕಾರದ ಗಮನಸೆಳೆಯುವ ದೃಷ್ಟಿಯಿಂದ ಬೃಹತ್ ವೈದ್ಯರ ರಾಜ್ಯಮಟ್ಟದ ಸಮಾವೇಶವನ್ನು ಹಮ್ಮಿಕೊಳ್ಳಲು ಉದ್ದೇಶಿಸಿದ್ದು. ಆ ಸಮಾವೇಶ ದಲ್ಲಿ ಸಾವಿರಾರು ವೈದ್ಯರು ಭಾಗವಹಿಸಲಿರುವರು. ಆ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಮಂತ್ರಿಗಳು, ಶಾಸಕರು,ಸಂಸದರು ,ಸಮಾಜದ ಗಣ್ಯ ವ್ಯಕ್ತಿಗಳ ಕೂಡುವಿಕೆಗೆ ಯೋಜನೆ ರೂಪಿಸಲಾಗಿದೆ. ಸರ್ವ ಜನರ ಸಹಕಾರದಿಂದ ಮಾತ್ರ ಸಾದ್ಯವಾಗಲಿದೆ.ಎಂದು ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕ
    ರಾಜ್ಯ ಸಂಘಟನಾ ಕಾರ್ಯದರ್ಶಿ ಮತ್ತು ಉಡುಪಿ ಜಿಲ್ಲಾದ್ಯಕ್ಷ ಡಾ. ರವೀಂದ್ರ ತಿಳಿಸಿದ್ದಾರೆ

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss