ಉಡುಪಿ: ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ವತಿಯಿಂದ ಕರಾವಳಿ ಕರ್ನಾಟಕದ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿ ಹಾಗೂ ಕಡಲು ಕೊರೆತಕ್ಕೆ ಶಾಶ್ವತ ಪರಿಹಾರ ಮತ್ತು ರುದ್ರ ಭೂಮಿ ಚಿತಾಗಾರಗಳ ವಿದ್ಯುದ್ದೀಕರಣದ ಬಗ್ಗೆ ಸಮಾಲೋಚನಾ ಸಭೆಯು ನವೆಂಬರ್ 18 ರಂದು ಶನಿವಾರ ಬೆಳಿಗ್ಗೆ 10:30 ಕ್ಕೆ ಉಡುಪಿಯ ಹೊಟೆಲ್ ಕಿದಿಯೂರು ಶೇಷಶಯನ ಸಭಾಗೃಹದಲ್ಲಿ ನಡೆಯಲಿದೆ.
ಮೀನುಗಾರಿಕಾ ಬಂದರು ಹಾಗೂ ಒಳನಾಡು ಸಾರಿಗೆ ಸಚಿವರಾದ ಮಾಂಕಾಳ್ ವೈದ್ಯ ಉದ್ಘಾಟನೆ ನೆರವೇರಿಸಲಿದ್ದಾರೆ. ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಅದ್ಯಕ್ಷರಾದ ಎಲ್. ವಿ. ಅಮೀನ್ ಅದ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಲಸಾರಿಗೆ ಸಚಿವರಾದ ಶ್ರೀಪಾದ್ ನಾಯ್ಕ್, ಉಡುಪು ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮೀ ಆರ್ ಹೆಬ್ಬಾಳ್ ಕರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಶಾಸಕರಾದ ಯಶಪಾಲ್ ಸುವರ್ಣ, ಕಾಪು ಶಾಸಕರಾದ ಗುರ್ಮೆ ಶ್ರೀ ಸುರೇಶ್ ಶೆಟ್ಟಿ, ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಅನಿವಾಸಿ ಭಾರತೀಯ ಉಪಾಧ್ಯಕ್ಷರಾದ ಡೇವಿಡ್ ಫ್ರ್ಯಾಂಕ್ ಫೆರ್ನಾಂಡಿಸ್ ಭಾಗವಹಿಸಲಿದ್ದಾರೆ.
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಉಡುಪಿ ಮತ್ತು ದ.ಕ ಜಿಲ್ಲೆ ಅದ್ಯಕ್ಷರಾದ ಡಿ.ಆರ್ ರಾಜು ಪ್ರಸ್ತಾವನೆ ಸಲ್ಲಿಸಿದ್ದಾರೆ.