ಸುಳ್ಯ, ಜುಲೈ 8: ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಮುಖ ಪದಾಧಿಕಾರಿಗಳ ಸಭೆಯು ಜುಲೈ 12ರಂದು ಸುಳ್ಯ ತಾಲೂಕು ಕಚೇರಿ ಬಳಿಯ ಬ್ರಹ್ಮ ಶ್ರೀ ಸಭಾಂಗಣದಲ್ಲಿ ರವಿವಾರ ಬೆಳಿಗ್ಗೆ 10 ಗಂಟೆಗೆ ಸುಳ್ಯ ತಾಲೂಕು ಅದ್ಯಕ್ಷ ಸುಕುಮಾರ್ ಕೋಡ್ತುಗುಳಿ ಯವರ ಅದ್ಯಕ್ಷತೆಯಲ್ಲಿ ಜರಗಲಿರುವುದು, ಪಕ್ಷದ ಸಂಘಟನೆ ಬಲವರ್ಧನೆ ಹಾಗೂ ತಳಮಟ್ಟದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬುವ ಉದ್ದೇಶದಿಂದ ಈ ಸಭೆಯನ್ನು ಆಯೋಜಿಸಲಾಗಿದೆ.
ಸಭೆಯಲ್ಲಿ ಜಿಲ್ಲಾ ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವ ಕುರಿತು ಸಮಗ್ರ ಚರ್ಚೆ ನಡೆಯಲಿದ್ದು, ಮುಂಬರುವ ರಾಜಕೀಯ ಬೆಳವಣಿಗೆಗಳು, ಸದಸ್ಯತ್ವ ಅಭಿಯಾನ, ಪಕ್ಷದ ಕಾರ್ಯಕ್ರಮಗಳ ವಿಸ್ತರಣೆ ಹಾಗೂ ಗ್ರಾಮ ಮಟ್ಟದಲ್ಲಿ ಸಂಘಟನೆಯನ್ನು ಪರಿಣಾಮಕಾರಿಯಾಗಿ ಮಾಡುವ ಬಗ್ಗೆ ವಿಶೇಷ ಕಾರ್ಯಯೋಜನೆ ರೂಪಿಸಲಾಗುತ್ತದೆ.
ಸಭೆಯಲ್ಲಿ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಜಾಕೆ ಮಾಧವ ಗೌಡ ಹಾಗೂ ರಾಜ್ಯ ಉಪಾಧ್ಯಕ್ಷರಾದ ಎಂ.ಬಿ ಸದಾಶಿವರವರು, ಮಾಜಿ ಜಿಲ್ಲಾದ್ಯಕ್ಷರಾದ ಮಹಮ್ಮದ್ ಕುಂಇ್, ಜಿಲ್ಲಾ ಕಾರ್ಯದ್ಯಕ್ಷರುಗಳಾದ ಇಕ್ಬಲ್ ಅಹಮದ್ ಮುಲ್ಕಿ , ವಸಂತ ಪೂಜಾರಿ , ಶಶಿರಾಜ್ ಶೆಟ್ಟಿ ಕೊಳಂಬೆ, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು, ಯುವ ಘಟಕ ಜಿಲ್ಲಾದ್ಯಕ್ಷರಾದ ಅಕ್ಷಿತ್ ಸುವರ್ಣ , ಮೀನುಗಾರ ಘಟಕ ರಾಜ್ಯಾದ್ಯಕ್ಷ ರತ್ನಾಕರ್ ಸುವರ್ಣ, ಮಹಿಳಾ ಜಿಲ್ಲಾದ್ಯಕ್ಷೆ ರಮೀಜಾ ಭಾನು ಸೇರಿದಂತೆ ಜಿಲ್ಲಾ ವ್ಯಾಪ್ತಿಯ ಎಲ್ಲಾ ಕ್ಷೇತ್ರ ಅದ್ಯಕ್ಷರುಗಳು, ಪ್ರಮುಖ ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು, ಮುಖಂಡರು ಹಾಗೂ ಆಹ್ವಾನಿತ ನಾಯಕರು ಭಾಗವಹಿಸಲಿದ್ದಾರೆ.
ಸುಳ್ಯ ತಾಲೂಕಿನ ಎಲ್ಲಾ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಜೆಡಿಎಸ್ ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಂಟಿಕಾನರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

