ಮಂಗಳೂರು, ಜೂನ್ 15: ಜನತಾದಳ ಜಾತ್ಯಾತೀತ (ಜೆಡಿಎಸ್) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ಮಹತ್ವದ ಸಭೆಯು ಜೂನ್ 16, 2026ರಂದು ಮಂಗಳವಾರ ಮಧ್ಯಾಹ್ನ 2.30 ಗಂಟೆಗೆ ನಗರದ ವುಡ್ಲ್ಯಾಂಡ್ಸ್ ಹೋಟೆಲ್ನಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ರಮೀಝಾ ನಾಸೀರ್ ವಹಿಸಲಿದ್ದು, ಜಿಲ್ಲಾದ್ಯಕ್ಷರಾದ ಜಾಕೆ ಮಾಧವ ಗೌಡ ಮತ್ತು ಪಕ್ಷದ ರಾಜ್ಯ ಹಾಗೂ ಜಿಲ್ಲಾ ಘಟಕದ ಪ್ರಮುಖ ಪದಾಧಿಕಾರಿಗಳು ಭಾಗವಹಿಸಿ ಮಹಿಳಾ ಕಾರ್ಯಕರ್ತೆಯರಿಗೆ ಮಾರ್ಗದರ್ಶನ ನೀಡಲಿದ್ದಾರೆ.
ಸಭೆಯಲ್ಲಿ ಪಕ್ಷದ ಸಂಘಟನೆ ಬಲವರ್ಧನೆ, ಮಹಿಳಾ ಘಟಕದ ವಿಸ್ತರಣೆ, ಮುಂಬರುವ ರಾಜಕೀಯ ಕಾರ್ಯಕ್ರಮಗಳ ರೂಪುರೇಷೆ, ಸದಸ್ಯತ್ವ ಅಭಿಯಾನ, ಮಹಿಳಾ ಕಾರ್ಯಕರ್ತೆಯರ ಪಾತ್ರ ಹಾಗೂ ಪಕ್ಷದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.
ಆದ್ದರಿಂದ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತೆಯರು ಸಭೆಗೆ ಸಮಯಕ್ಕೆ ಸರಿಯಾಗಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ರಮೀಝಾ ನಾಸೀರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಥಳ: ವುಡ್ಲ್ಯಾಂಡ್ಸ್ ಹೋಟೆಲ್, ಮಂಗಳೂರು
ದಿನಾಂಕ: 16-06-2026 (ಮಂಗಳವಾರ)
ಸಮಯ: ಮಧ್ಯಾಹ್ನ 2.30 ಗಂಟೆ

