ತುಮಕೂರು : ಜೀನಿ ಕಂಪನಿ ಮಾಲೀಕನ ವಿರುದ್ಧ ಅತ್ಯಚಾರಕ್ಕೆ ಯತ್ನ ಆರೋಪದ ಮೇಲೆ ಜೀನಿ ಉದ್ಯೋಗಿನಿಯಿಂದ ಮಾಲೀಕ ದಿಲೀಪ್ಕುಮಾರ್ ವಿರುದ್ಧ ದೂರು ದಾಖಲಾಗಿದೆ. ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಯರಕುಂಟೆ ಗ್ರಾಮದಲ್ಲಿನ ಜೀನಿ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದ್ದು ಉದ್ಯೋಗಿನಿ ಮೇಘನಾ ಜೀನಿ ಮಾಲೀಕನ ವಿರುದ್ಧ ದೂರು ದಾಖಲಿಸಿದ್ದಾರೆ.
ಸಿರಾ ತಾಲ್ಲೂಕಿನ ದೊಡ್ಡಗೊಳ ನಿವಾಸಿ ಮೇಘನಾ ಜೀನಿ ಫ್ಯಾಕ್ಟರಿಯಲ್ಲಿ ಕಳೆದ 10 ತಿಂಗಳಿಂದ ಕೆಲಸ ಮಾಡುತ್ತಿದ್ದು 6 ತಿಂಗಳಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದ್ದಾರೆ. ಜೀನಿ ಫ್ಯಾಕ್ಟರಿಯಲ್ಲಿ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆಂದು ಆರೋಪಿಸಿದ್ದು ಸಹಕರಿಸುವಂತೆ ಬೇಡಿಕೆಯಿಟ್ಟು ರಾಣಿ ತರ ನೊಡಿಕೊಳ್ಳುತ್ತೇನೆ ಎಂದು ಕೈ ಹಿಡಿದು ಎಳೆದಾಡಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿದೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಜೀನಿ ಮಾಲೀಕ ದಿಲೀಪ್ ಕುಮಾರ್ ವಿರುದ್ಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರಕ್ಕೆ ಯತ್ನ, ಜಾತಿನಿಂದನೆ ಅಡಿ ದೂರು ದಾಖಲಾಗಿದೆ.
ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಜೀನಿ ಮಾಲೀಕ ದಿಲೀಪ್ ಕುಮಾರ್, ಜೀನಿ ಸಂಸ್ಥೆಯ ಬೆಳವಣಿಗೆಯನ್ನು ಸಹಿಸದ ಕೆಲವು ವ್ಯಕ್ತಿಗಳು, ಮಹಿಳೆಯರನ್ನು ಮುಂದಿಟ್ಟುಕೊಂಡು ಕುತಂತ್ರ ನಡೆಸುತ್ತಿದ್ದಾರೆ. ತನ್ನ ವಿರುದ್ಧ ಕೇಳಿಬಂದಿರುವ ಲೈಂಗಿಕ ಕಿರುಕುಳ ಆರೋಪ ಸುಳ್ಳು ಎಂದು ತಿಳಿಸಿದ್ದಾರೆ.
