ಮಂಗಳೂರು: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜು.4 ರಿಂದ 5 ರ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜು.5 ರಂದು ದ.ಕ.ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮವಾಗಿ ದ.ಕ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೆಲವೊಂದು ತುರ್ತು ಕ್ರಮಗಳನ್ನು ಕೈಗೊಂಡಿದೆ.