Sunday, September 8, 2024
spot_img
More

    Latest Posts

    ಮಂಗಳೂರು : ಲಂಚಕ್ಕೆ ಬೇಡಿಕೆ ಇಟ್ಟ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾಯಕ್ತ ಬಲೆಗೆ

    ಮಂಗಳೂರು : ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ನಡೆಸಿದ ಕಾಮಗಾರಿ ನಡೆಸಿದ ಬಳಿಕ ಸ್ಥಳದ ಮೆಟೀರಿಯಲ್ ಪರಿಶೀಲನೆ ನಡೆಸಿ ವರದಿ ನೀಡಲು ಬೆಳ್ತಂಗಡಿಯ ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಂಗಳೂರಿನ ಬೋಂದೆಲ್ ನಲ್ಲಿರುವ ಸಹಾಯಕ ಕಾರ್ಯಪಾಲ ಇಂಜಿನಿಯರವರ ಕಛೇರಿ, ಲೋಕೋಪಯೋಗಿ ಇಲಾಖೆ ಗುಣ ಭರವಸೆ ಉಪವಿಭಾಗದ ಇದರ ಕಿರಿಯ ಇಂಜಿನಿಯರ್-2 ಲೋಕಾಯಕ್ತ ಬಲೆಗೆ ಬಿದ್ದ ಘಟನೆ ಇಂದು ನಡೆದಿದೆ.

    ಮಂಗಳೂರು ಬೋಂದೆಲ್ ನಲ್ಲಿರುವ ಸಹಾಯಕ ಕಾರ್ಯಪಾಲಕ ಇಂಜಿನಿಯರವರ ಕಚೇರಿ ಲೋಕೋಪಯೋಗಿ ಇಲಾಖೆಯ ಗುಣ ಭರವಸೆ ಉಪವಿಭಾಗದ  ಕಿರಿಯ ಇಂಜಿನಿಯರ್ -2 ಅಗಿರುವ ರೋನಾಲ್ಡ್ ಲೋಬೋ ಎಂಬಾತ ಬೆಳ್ತಂಗಡಿಯ ಗುತ್ತಿಗೆದಾರರೊಬ್ಬರಿಂದ 20,000/- ಲಂಚದ ಹಣ ಸ್ವೀಕರಿಸುತ್ತಿದ್ದಾಗ ಇಂದು ಮಧ್ಯಾಹ್ನದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಆರೋಪಿ ಕಿರಿಯ ಇಂಜಿನಿಯರ್ ನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss