ಬೆಂಗಳೂರು): ಎರಡು ತಿಂಗಳ ಹಿಂದೆಷ್ಟೆ ಪ್ರೀತಿಸಿ ಮದುವೆಯಾಗಿದ್ದ ಮಹಿಳೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ.
ಅನುಷಾ (23) ಅನುಮಾನಸ್ಪಾದವಾಗಿ ಸಾವನ್ನಪ್ಪಿದ್ದು, ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಮಂಡ್ಯ ಜಿಲ್ಲೆಯ ಮಳ್ಳವಳ್ಳಿ ಮೂಲದ ಪ್ರವೀಣ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಮಹದೇವಪುರದ ಪೊಲೀಸ್ ಠಾಣಾ ವ್ಯಾಪ್ತಿಯ ಸಿಂಗಯ್ಯಪಾಳ್ಯದಲ್ಲಿ ವಾಸವಾಗಿದ್ದರು.
ಅತ್ತೆ ನಾಗಮ್ಮ ಮತ್ತು ಸೋದರ ಮಾವ ರಾಜೇಶ್ ನಿಂದ ಕಿರುಕುಳ ನೀಡಲಾಗಿದೆ, ಪತಿಯ ಕುಟುಂಬದರಿಂದ ಯುವತಿಗೆ ಹಲ್ಲೆ ಯನ್ನೂ ನಡೆಸಲಾಗಿದೆ ಎಂಬ ಆರೋಪ ಮಾಡಲಾಗಿದೆ. ಮಹದೇವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.