Friday, March 29, 2024
spot_img
More

    Latest Posts

    ಕರ್ನಾಟಕ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ.ಎಸ್​. ಪಾಟೀಲ್​ ಅಧಿಕಾರ ಸ್ವೀಕಾರ

    ಬೆಂಗಳೂರು: ಕರ್ನಾಟಕ ಲೋಕಾಯುಕ್ತರಾಗಿ, ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್‌ ಅವರು ಇಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

    ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ನೂತನ ಲೋಕಾಯುಕ್ತರಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು.

    ನ್ಯಾಯಮೂರ್ತಿ ಬಿ.ಎಸ್​.ಪಾಟೀಲ್​ ಅವರು ಕನ್ನಡದಲ್ಲಿ, ಭಗವಂತ ಮತ್ತು ಸತ್ಯ-ನಿಷ್ಠೆಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನದ ಬಳಿಕ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುಷ್ಪಗುಚ್ಛ ನೀಡಿ ಅಭಿನಂದಿಸಿ, ಶುಭ ಹಾರೈಸಿದರು.

    ಲೋಕಾಯುಕ್ತರಾಗಿ ನೇಮಕವಾಗುವ ಮುನ್ನ ನ್ಯಾಯಮೂರ್ತಿ ಪಾಟೀಲ್‌ ಅವರು ಕರ್ನಾಟಕ ಹೈಕೋರ್ಟ್​ ನ್ಯಾಯಮೂರ್ತಿಯಾಗಿ ಹಾಗೂ ನಂತರ ಕರ್ನಾಟಕ ಲೋಕಾಯುಕ್ತದಲ್ಲಿ ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸಿದ್ದರು.

    ವಸತಿ ಸಚಿವ ವಿ ಸೋಮಣ್ಣ, ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ, ಶಾಸಕರಾದ ಬಸವರಾಜ ಪಾಟೀಲ್‌ ಯತ್ನಾಳ್‌, ಪಿ. ರಾಜೀವ್‌, ಕೆ. ಜೆ. ಜಾರ್ಜ್‌, ಎಂ. ಬಿ. ಪಾಟೀಲ್‌, ಈಶ್ವರ್‌ ಖಂಡ್ರೆ, ಲೋಕಾಯುಕ್ತರಾಗಿ ಈ ಹಿಂದೆ ಸೇವೆ ಸಲ್ಲಿಸಿದ ಸಂತೋಷ್‌ ಹೆಗಡೆ ಮತ್ತು ಪಿ. ವಿಶ್ವನಾಥ್‌ ಶೆಟ್ಟಿ ಅವರೂ ಸೇರಿದಂತೆ ಹಲವು ಗಣ್ಯರು, ಹೈಕೋರ್ಟ್​ ಒಳಗೊಂಡಂತೆ ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು ಮತ್ತು ನ್ಯಾಯಾಂಗ ಅಧಿಕಾರಿಗಳು, ವಕೀಲ ವೃಂದದ ಹಲವರು ಈ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss