ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಇಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಂ.ಆರ್.ಶಾ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ದೆಹಲಿಗೆ ಕರೆದೊಯ್ಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಸುಪ್ರೀಂ ಕೋರ್ಟ್ ಅಧಿಕಾರಿಗಳು ಗೃಹ ಸಚಿವಾಲಯದೊಂದಿಗೆ ಸಮನ್ವಯ ಸಾಧಿಸುತ್ತಿದ್ದಾರೆ ಮತ್ತು ಅವರನ್ನು ಚಿಕಿತ್ಸೆಗಾಗಿ ಏರ್ ಆಂಬ್ಯುಲೆನ್ಸ್ ಮೂಲಕ ದೆಹಲಿಗೆ ಕರೆತರುತ್ತಿದ್ದಾರೆ.
ಇನ್ನೂ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಂ.ಆರ್.ಶಾ ಅವರು ಗುರುವಾರ ಹೃದಯಾಘಾತಕ್ಕೆ ಒಳಗಾಗಿದ್ದ ಕಾರಣ, ಹಿಮಾಚಲ ಪ್ರದೇಶದಿಂದ ಏರ್ ಆಂಬ್ಯುಲೆನ್ಸ್ ನಲ್ಲಿ ನ್ಯಾಯಮೂರ್ತಿ ಶಾ ಅವರನ್ನು ರಾಷ್ಟ್ರ ರಾಜಧಾನಿಗೆ ಸಾಗಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. ಶಾ ಅವರ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
