ಬೆಂಗಳೂರು : ಚುನಾವಣಾ ರಾಜಕೀಯಕ್ಕೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಮಹತ್ವದ ಬೆಳವಣಿಗೆಯಲ್ಲಿ ಜೆ.ಪಿ ನಡ್ಡಾಗೆ ಪತ್ರ ಬರೆದಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ‘ರಾಜಕೀಯ ನಿವೃತ್ತಿ’ ಘೋಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ವಿಧಾನಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಕೆ.ಎಸ್ ಈಶ್ವರಪ್ಪ ‘ರಾಜಕೀಯ ನಿವೃತ್ತಿ’ ಘೋಷಣೆ ಮಾಡಿದ್ದು, ಹಲವು ಅಚ್ಚರಿಗೆ ಕಾರಣವಾಗಿದೆ.
ನಾನು ಸ್ವಇಚ್ಚೆಯಿಂದ ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ , ನಾನು ಇನ್ನುಮುಂದೆ ಯಾವುದೇ ರೀತಿಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಪತ್ರ ಬರೆದಿದ್ದಾರೆ.
