Wednesday, April 24, 2024
spot_img
More

    Latest Posts

    ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ – ಪ್ರಯಾಣಿಕರು ಪಾರು

    ಕಡಬ: ಕೊಂಬಾರು ಗ್ರಾಮದ ಪೆರುಂದೋಡಿ ಕಟ್ಟೆ ಎಂಬಲ್ಲಿ ಚಲಿಸುತ್ತಿರುವಾಗಲೇ ಝೈಲೋ ಕಾರು ಬೆಂಕಿಗಾಹುತಿಯಾದ ಘಟನೆ ಮೇ.14 ರ ರಾತ್ರಿ ನಡೆದಿದೆ.

    ಪಟ್ರಮೆ ನಿವಾಸಿ ಆನಂದ ಗೌಡ ಎಂಬವರು ತಮ್ಮ ಕುಟುಂಬಸ್ಥರೊಂದಿಗೆ ಕಾರಿನಲ್ಲಿ ಸಂಬಂಧಿಕರ ಮನೆಗೆ ಹೋಗುತ್ತಿದ್ದು, ಈ ವೇಳೆ ಕಾರಿನಲ್ಲಿ ಅಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಕಾರಿನ ಬಹುತೇಕ ಭಾಗಗಳು ಸಂಪೂರ್ಣ ಭಸ್ಮವಾಗಿದೆ.

    ಇನ್ನು ಕಾರಿನಲ್ಲಿ ಇಬ್ಬರು ಗಂಡಸರು, ಓರ್ವ ಮಹಿಳೆ ಹಾಗೂ ಮಗು ಇದ್ದು, ಕಾರಿನಲ್ಲಿದ್ದ ಓರ್ವರಿಗೆ ಸಣ್ಣ ಗಾಯವಾಗಿದ್ದು ಎಲ್ಲರೂ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.

    ಕಾರು ಹೊತ್ತಿ ಉರಿಯುತ್ತಿದ್ದಂತೆ ಪುತ್ತೂರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು ಅಗ್ನಿಶಾಮಕ ದಳ ಆಗಮಿಸಿದ ವೇಳೆಗಾಗಲೇ ಕಾರಿನ ಬಹುತೇಕ ಭಾಗಗಳು ಸಂಪೂರ್ಣ ಹೊತ್ತಿ ಉರಿದಿತ್ತು ಎನ್ನಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss