Thursday, April 18, 2024
spot_img
More

    Latest Posts

    ಬಂಡೆ ಉರುಳಿ ಬಿದ್ದ ಪರಿಣಾಮ ಹಳಿ ತಪ್ಪಿದ ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು

    ರೈಲು ಹಳಿಯ ಮೇಲೆ ಬಂಡೆಗಳು ಉರುಳಿ ಬಿದ್ದ ಪರಿಣಾಮ ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್‌‌ ರೈಲಿನ 5 ಬೋಗಿಗಳು ಹಳಿ ತಪ್ಪಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಇಂದು ಮುಂಜಾನೆ 3.50ರ ಸುಮಾರಿಗೆ .ಧರ್ಮಪುರಿಯ ತೊಪ್ಪೂರು ಬಳಿ 5 ಬೋಗಿಗಳು ಹಳಿ ತಪ್ಪಿವೆ.ಬೆಂಗಳೂರು ರೈಲ್ವೆ ವಿಭಾಗದ ವ್ಯಾಪ್ತಿಯಲ್ಲಿ ಬರುವ ತೊಪ್ಪೂರು-ಸಿವಾಡಿ ಮಧ್ಯೆ ಹಳಿಯ ಬಂಡೆಗಳು ಉರುಳಿಬಿದ್ದ ಪರಿಣಾಮ ರೈಲು ಹಳಿ ತಪ್ಪಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.ರೈಲಿನಲ್ಲಿ ಪ್ರಯಾಣಿಸುತ್ತಿದ್ದ 2348 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಯಾವುದೇ ಸಾವು -ನೋವು ವರದಿಯಾಗಿಲ್ಲ ಎಂದು ನೈಋತ್ಯ ರೈಲ್ವೆ ವರದಿ ಮಾಡಿದೆ.ಘಟನೆಯ ಬಗ್ಗೆ ಮಾಹಿತಿ ಪಡೆದ ರೈಲ್ವೆ ಉನ್ನತ ಅಧಿಕಾರಿಗಳು ಹಾಗೂ ಸ್ಥಳೀಯ ಆಡಳಿತವು ಸ್ಥಳಕ್ಕೆ ಭೇಟಿ ನೀಡಿದ್ದು, ಸದ್ಯ ಸ್ಥಳದಲ್ಲಿ ರಕ್ಷಣ ಕಾರ್ಯಾಚರಣೆ ನಡೆಯುತ್ತಿದೆ.ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್‌‌ನ ಪ್ರಯಾಣಿಕರನ್ನು ಅವರು ತೆರಳಬೇಕಿದ್ದ ಊರುಗಳಿಗೆ ಕಳಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss