ಕಾಪು: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಟಪಾಡಿಯ ಭಾಗ್ಯಲಕ್ಷ್ಮೀ ಗ್ರಾನೈಟ್ಸ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಇನ್ನಂಜೆಯ ಉತ್ತಮ (33) ಎಂದು ಗುರುತಿಸಲಾಗಿದೆ. ಪೇಟಿಂಗ್ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಇವರು, ರಸ್ತೆಯನ್ನು ದಾಟಲು ರಸ್ತೆ ಬದಿ ನಿಂತುಕೊಂಡಿದ್ದರು. ಈ ವೇಳೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಇವರಿಗೆ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿತ್ತು. ಇದರಿಂದ ಗಂಭೀರ ಗಾಯಗೊಂಡಿದ್ದ ಉತ್ತಮ, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
©2021 Tulunada Surya | Developed by CuriousLabs