ಬಂಟ್ವಾಳ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು “ಚಿಣ್ಣರಲೋಕ ಲೋಕದ ಕಲಾವಿದರ ಸೇವಾ ಟ್ರಸ್ಟ್ ಬಂಟ್ವಾಳ ಇದರ ಆಶ್ರಯದಲ್ಲಿ ಬಿ. ಸಿ. ರೋಡಿನ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ಒಂದು ತಿಂಗಳ ಕಾಲ ನಡೆಯಲಿರುವ ‘ಕರಾವಳಿ ಕಲೋತ್ಸವ – 2022’ಕ್ಕೆ ಸಂಭ್ರಮದ ಚಾಲನೆ ನೀಡಲಾಯಿತು. ಕೀರ್ತಿ ಶೇಷ ಡಾ. ಲಕ್ಷ್ಮೀನಾರಾಯಣ ಆಳ್ವ ವೇದಿಕೆ, ಚಿಣ್ಣರ ಚಿತ್ರಕಲೆ ಪ್ರದರ್ಶನ, ಅಮ್ಯೂಸ್ ಮೆಂಟ್ ಪಾರ್ಕ್, ವಿವಿಧ ಮಳಿಗೆಗಳು ಹಾಗೂ ಕರಾವಳಿ ಕಲೋತ್ಸವ – 2022 ನ್ನು ಉದ್ಘಾಟನೆಗೈದು ಚಿಣ್ಣರಲೋಕ ನಿರಾಶ್ರಿತರ ಸೇವಾಶ್ರಮದ ನೀಲಿ ನಕ್ಷೆ ಅನಾವರಣಗೊಳಿಸಿದ ಮಾಜಿ ಸಚಿವ ರಮಾನಾಥ ರೈ ಮಾತನಾಡಿದರು. ಕಲೋತ್ಸವ ಸಮಿತಿ ಅಧ್ಯಕ್ಷ ಸುದರ್ಶನ್ ಜೈನ್ ಸಭಾಧ್ಯಕ್ಷತೆ ವಹಿಸಿದ್ದರು. ಚಿಣ್ಣರ ಅಧ್ಯಕ್ಷೆ ಕು. ಜನ್ಯ ಪ್ರಸಾದ್, ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ದಯಾನಂದ ಕತ್ತಲಸಾರ್, ಸಂಸ್ಕಾರ ಭಾರತೀಯ ಜಿಲ್ಲಾಧ್ಯಕ್ಷ ತಾರನಾಥ ಕೊಟ್ಟಾರಿ ತೇವು, ಉದ್ಯಮಿ ದೇವಿಚರಣ್, ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಸದಸ್ಯ, ಕಲಾವಿದ ಚೇತಕ್ ಪೂಜಾರಿ, ನಿವೃತ್ತ ಬಾಂಕ್ ಉದ್ಯೋಗಿ ಬೇಬಿಕುಂದರ್, ಚಿಣ್ಣರಲೋಕ ಲೋಕದ ಕಲಾವಿದರ ಸೇವಾ ಟ್ರಸ್ಟ್ ನ ಮಂಗಳೂರು ಸಂಚಾಲಕಿ ವಿಶಾಲಾಕ್ಷಿ ಅತಿಥಿಗಳಾಗಿ ಭಾಗವಹಿಸಿದ್ದರು. ಇದೇ ವೇಳೆ ಚಲನಚಿತ್ರ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ‘ಕರಾವಳಿ ಸೌರಭ’ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬಾಲ ಪ್ರತಿಭೆಗಳಾದ ಕು. ಕ್ಷಿತಿ ಕೆ. ರೈ ಧರ್ಮಸ್ಥಳ , ಕು. ಶೃತಿ ದೇವಾಡಿಗ ಬಿ. ಸಿ. ರೋಡು ಚಿಣ್ಣರ ಸೌರಭ ರಾಜ್ಯ ಪ್ರಶಸ್ತಿ ಪ್ರಧಾನಗೈದು ಅಭಿನಂದಿಸಲಾಯಿತು. ಪ್ರಶಸ್ತಿ ಸ್ವೀಕರಿಸಿ ಗುರುಕಿರಣ್, ಮಾತನಾಡಿದರು. ಸ್ವಾಗತ ಸಮಿತಿ ಅಧ್ಯಕ್ಷ ಸರಪಾಡಿ ಆಶೋಕ ಶೆಟ್ಟಿ ಸ್ವಾಗತಿಸಿದರು. ಟ್ರಸ್ಟ್ ನ ಪ್ರಧಾನ ಸಂಚಾಲಕ ಮೋಹನದಾಸ್ ಕೊಟ್ಟಾರಿ ಪ್ರಸ್ತಾವಿಸಿದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.

