Monday, November 29, 2021

ಜ್ವರದಿಂದ ಬಳಲುತ್ತಿದ್ದ ಯುವಕ ಸಾವು

ಜ್ವರದಿಂದ ಬಳಲುತ್ತಿದ್ದ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗೋಳಿತೊಟ್ಟಿನಲ್ಲಿ ನಡೆದಿದೆ. ಗೋಳಿತೊಟ್ಟು ಗ್ರಾಮದ ಡೆಬ್ಬೇಲಿ ನಿವಾಸಿ ಮಹೇಶ್ (27) ಮೃತ ಯುವಕ. ಇವರು ಕೆಲ ದಿನಗಳಿಂದ...
More

    Latest Posts

    ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

    ದಾವಣಗೆರೆ: ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಶಾಲಾ-ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಿದ್ದು, ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

    ಬ್ರಹ್ಮಾವರ: ಅಂತಾರಾಷ್ಟ್ರೀಯ ಈಜು ಸ್ಪರ್ಧೆಗೆ ಗುಂಡ್ಮಿ ಗೋಪಾಲ ಖಾರ್ವಿ ಆಯ್ಕೆ

    ಬ್ರಹ್ಮಾವರ: ಮಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಮಾಸ್ಟರ್ಸ್ ಈಜು ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಗುಂಡ್ಮಿ ನಿವಾಸಿ ಗೋಪಾಲ ಖಾರ್ವಿ ಕೋಡಿಕನ್ಯಾಣ ಅವರು ನಾಲ್ಕು ಪದಕ ಪಡೆದು ಅಂತಾರಾಷ್ಟ್ರೀಯ ಈಜು ಚಾಂಪಿಯನ್ ಶಿಪ್...

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಕಾರಿಂಜದಲ್ಲಿ ರುದ್ರಗಿರಿಯ ರಣಕಹಳೆಯಲ್ಲಿ ನಿಂದನಾತ್ಮಕ ಭಾಷಣ- ಜಿಲ್ಲಾಧಿಕಾರಿಯಿಂದ ಜಗದೀಶ ಕಾರಂತ ವಿರುದ್ಧ ಪ್ರಕರಣ ದಾಖಲು

    ಪುಂಜಾಲಕಟ್ಟೆ : ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಶ್ರೀ ಕಾರಿಂಜೇಶ್ವರ ದೇವಸ್ಥಾನದ ವಠಾರದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ವಿರುದ್ಧ ನಿಂದನಾತ್ಮಕ ಮಾತುಗಳನ್ನಾಡಿದ ಹಿಂದೂ ಜಾಗರಣ ವೇದಿಕೆ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ ಕಾರಂತ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
           ಈ ಬಗ್ಗೆ ದ.ಕ.ಜಿಲ್ಲಾ  ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ದೂರು ನೀಡಿದ್ದು, ಶ್ರೀ ಕಾರಿಂಜೇಶ್ವರ ದೇವಸ್ಥಾನದ ಪಾವಿತ್ರ್ಯತೆ ಉಳಿಸುವಂತೆ, ಪರಿಸರದಲ್ಲಿ ನಡೆಯುತ್ತಿರುವ ಗಣಿಗಾರಿಕೆ ನಿಲ್ಲಿಸುವಂತೆ, ದೇವಸ್ಥಾನಕ್ಕೆ ಅನ್ಯ ಮತೀಯರ ಪ್ರವೇಶ ನಿರ್ಬಂಧಿಸುವಂತೆ ಆಗ್ರಹಿಸಿ ಬಂಟ್ವಾಳ ತಾ.ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಕಾರಿಂಜ ರಥಬೀದಿಯಲ್ಲಿ ನಡೆದ ರುದ್ರಗಿರಿಯ ರಣಕಹಳೆ ಜನಜಾಗೃತಿ ಸಭೆಯಲ್ಲಿ ಜಗದೀಶ ಕಾರಂತ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರನ್ನುದ್ದೇಶಿಸಿ, ಬಂಟ್ವಾಳ ತಾಲೂಕಿನ ಕಾರಿಂಜೇಶ್ವರ ದೇವಸ್ಥಾನದ ಸುತ್ತಮುತ್ತ ನಡೆಯುವ ಗಣಿಗಾರಿಕೆಯನ್ನು ನಿಲ್ಲಿಸಲು ಡಿಸೆಂಬರ್ 21 ರವರೆಗೆ ಗಡುವು ಕೊಟ್ಟಿದ್ದೇವೆ, ಇಲ್ಲದಿದ್ದರೆ ಡಿಸೆಂಬರ್ 21 ಕ್ಕೆ ಎಲ್ಲರೂ ಸಿದ್ಧರಾಗಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ, ಜಿಲ್ಲಾಧಿಕಾರಿಗಳ ಕಛೇರಿಗೆ ಲಗ್ಗೆ ಹಾಕಿ, ಅವನ ಕೊರಳು ಪಟ್ಟಿಯನ್ನು ಹಿಡಿಯುತ್ತೀವಿ. ತಾಕತ್ತಿದ್ದರೆ ಕಲ್ಲುಗಣಿಗಾರಿಕೆಯನ್ನು ನಿಲ್ಲಿಸೋ, ಇಲ್ಲವಾದರೇ ಟ್ರಾನ್ಸ್ ಫರ್ ತೆಗೆದುಕೊಂಡು ಹೋಗೋ, ಎಂಬಿತ್ಯಾದಿ ರೀತಿಯಲ್ಲಿ ಏಕವಚನ ಮತ್ತು ಅಸಭ್ಯವಾಗಿ ಮಾತುಗಳನ್ನಾಡುವ ಮೂಲಕ ಜಿಲ್ಲಾಧಿಕಾರಿ ಹುದ್ದೆಗೆ ಅಗೌರವ ತೋರಿಸಿರುವುದಲ್ಲದೇ, ಸರಕಾರಿ ಅಧಿಕಾರಿಗೆ ಬೆದರಿಕೆಯೊಡ್ಡುವ ರೀತಿಯಲ್ಲಿ ಪ್ರಚೋದನೆಯನ್ನು ಹಾಗೂ ಅಪರಾಧಕ್ಕೆ  ದುಷ್ಪ್ರೇರಣೆ ನೀಡಿರುತ್ತಾರೆ. ಜಗದೀಶ್ ಕಾರಂತ್ ಅವರು ಅಪರಾದ ಕೃತ್ಯವನ್ನು ಎಸಗುವ ಮನೋಧೋರಣೆ  ಹೊಂದಿ ಪ್ರಚೋದಾನಾ ಕಾರಿಯಾಗಿ ಬೆದರಿಕೆಯೊಡ್ಡಿರುವುದರಿಂದ ಮತ್ತು ಸಾವಿರಾರು ಜನಕ್ಕೆ ಅಪರಾಧಿಕ ಕೃತ್ಯವೆಸಗಲು ಪ್ರೇರಣೆ ನೀಡಿ ಅಪರಾಅಧಿಕಾ ಭೀತಿಯನ್ನುಂಟು ಮಾಡಿರುತ್ತಾರೆ. ಹಾಗೂ ಅಪರಾಧ ಕೃತ್ಯ ನಡೆಸಲು ಪ್ರೇರಣೆಯನ್ನು ಮತ್ತು ಬೆದರಿಕೆಯನ್ನೊಡ್ಡಿದ್ದು, ಡಿಸೆಂಬರ್ 21 ಕ್ಕೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಜಿಲ್ಲಾಧಿಕಾರಿ ಕಛೇರಿಗೆ ಲಗ್ಗೆ ಹಾಕಿ ಜಿಲ್ಲಾಧಿಕಾರಿಗಳ ಕೊರಳಪಟ್ಟಿ ಹಿಡಿಯಿರಿ ಎಂದು ಪ್ರಚೋದಿಸುವ ಮೂಲಕ ಸಾರ್ವಜನಿಕ ನೌಕರನಿಗೆ ಅಪರಾಧಿಕ ಭೀತಿಯನ್ನುಂಟು ಮಾಡಿರುವುದಲ್ಲದೇ, ಸರಕಾರಿ ಅಧಿಕಾರಿಗೆ ಹಾನಿ ಮತ್ತು ಹಲ್ಲೆ ಮಾಡಲು ಪ್ರಚೋದಿಸಿ ಬೆದರಿಕೆ ಹಾಕಿರುತ್ತಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    Latest Posts

    ಲಾಕ್ ಡೌನ್ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

    ದಾವಣಗೆರೆ: ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವನೆ ಇಲ್ಲ. ಶಾಲಾ-ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಿದ್ದು, ಅವುಗಳನ್ನು ಮುಚ್ಚಲು ತಿಳಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

    ಬ್ರಹ್ಮಾವರ: ಅಂತಾರಾಷ್ಟ್ರೀಯ ಈಜು ಸ್ಪರ್ಧೆಗೆ ಗುಂಡ್ಮಿ ಗೋಪಾಲ ಖಾರ್ವಿ ಆಯ್ಕೆ

    ಬ್ರಹ್ಮಾವರ: ಮಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಮಾಸ್ಟರ್ಸ್ ಈಜು ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಗುಂಡ್ಮಿ ನಿವಾಸಿ ಗೋಪಾಲ ಖಾರ್ವಿ ಕೋಡಿಕನ್ಯಾಣ ಅವರು ನಾಲ್ಕು ಪದಕ ಪಡೆದು ಅಂತಾರಾಷ್ಟ್ರೀಯ ಈಜು ಚಾಂಪಿಯನ್ ಶಿಪ್...

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    Don't Miss

    ಬಂಟ್ವಾಳ: ನಾಟಿ ವೈದ್ಯೆ ಚಂದ್ರಾವತಿ ನಿಧನ

    ಬಂಟ್ವಾಳ: ಬಂಟ್ವಾಳ ತಾಲೂಕು ಬಡಗಕಜೆಕಾರು ಗ್ರಾಮದ ಮಾಡಪಲ್ಕೆ ದಿ. ಡೊಂಬಯ್ಯ ಪೂಜಾರಿಯವರ ಪತ್ನಿ ಚಂದ್ರಾವತಿ ಅವರು ಅಸೌಖ್ಯದಿಂದ ಬಳಲುತ್ತಿದ್ದು ಇಂದು ಬೆಳಗ್ಗೆ ನಿಧನರಾದರು. ಹಿರಿಯರಾದ (105...

    ಮಂಗಳೂರು: ‘ಮಾಮ್‌’ ನೂತನ ಪದಾಧಿಕಾರಿಗಳ ಆಯ್ಕೆ

    ಮಂಗಳೂರು: ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್ ಆಫ್ ಮಂಗಳ ಗಂಗೋತ್ರಿ (ಮಾಮ್) ಇದರ ವಾರ್ಷಿಕ ಮಹಾಸಭೆ ಇತ್ತೀಚೆಗೆ ನಡೆದಿದ್ದು, ಸಭೆಯಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

    ಬಂಟ್ವಾಳ: ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

    ಬಂಟ್ವಾಳ: ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ...

    ಪಾಣೆಮಂಗಳೂರು ನೇತ್ರಾವತಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ!

    ಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ (62) ಮೃತಪಟ್ಟ ವ್ಯಕ್ತಿ....

    ಕಾಪು: ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಸಾವು

    ಕಾಪು: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನ.26ರ ಶುಕ್ರವಾರ ಮುಂಜಾನೆ ನಡೆದಿದೆ. ಮೃತರನ್ನು ಮಲ್ಲಾರು ಪಕೀರಣಕಟ್ಟೆ ಎಂ.ಜೆ.ಎಂ ಮಸೀದಿ ಬಳಿಯ ನಿವಾಸಿ ಅಬ್ದುಲ್ ರಜಾಕ್ (48)...