ಕಾರ್ಕಳ: ಕೆಲಸ ಮುಗಿಸಿ ತನ್ನ ಬೈಕಿನಲ್ಲಿ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕ್ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಾರ್ಕಳ ತಾಲೂಕಿನ ಗ್ರಾಮದ ಬೆದ್ರಬೆಟ್ಟು ಎಂಬಲ್ಲಿ ನಡೆದಿದೆ.
ಕೌಡೂರು ಬೆದ್ರಬೆಟ್ಟು ನಿವಾಸಿ ಸುಧಾಕರ ಆಚಾರ್ಯ (45) ಎಂಬವರು ಮೃತಪಟ್ಟ ಬೈಕ್ ಸವಾರ. ಬಡಗಿಯಾಗಿದ್ದ ಅವರು ಶನಿವಾರ ತಡರಾತ್ರಿ ಸುಮಾರು 11 ಗಂಟೆಗೆ ಕಲ್ಯಾ ಗ್ರಾಮದ ಹಾಳೆಕಟ್ಟೆಯಿಂದ ಮರದ ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದು ಗಂಭೀರ ಗಾಯಗಳೊಂದಿಗೆ ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಅತಿ ವೇಗವಾಗಿ ಬೈಕ್ ಚಲಾಯಿಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.